ಪಿ.ಯು.ಸಿ. ಮತ್ತು ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಕೆ.ಎಸ್.ಆರ್.ಟಿ.ಸಿ. ಬಸ್ ಪ್ರಯಾಣ

Published on

ವಿಜಯವಾಣಿ ಸುದ್ದಿಜಾಲ ಕೋಲಾರ

ದ್ವಿತಿಯು ಪಿ.ಯು.ಸಿ. ಪರೀಕ್ಷೆ ಮಾ.೧ ರಿಂದ ೨೦ ಹಾಗೂ ಎಸ್.ಎಸ್.ಎಲ್.ಸಿ. ಪರೀಕ್ಷೆ ಮಾ.೨೧ ರಿಂದ ಏ.೦೪ರ ವರೆಗೆ ವಾರ್ಷಿಕ ಪರೀಕ್ಷೆಗಳು ನಡೆಯಲಿರುವುದರಿಂದ ಕೆ.ಎಸ್.ಆರ್.ಟಿ.ಸಿ.ಯು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಿರುವುದರಿಂದ ಕೋಲಾರ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳು ಈ ಉಪಯೋಗವನ್ನು ಪಡೆದುಕೊಳ್ಳಬಹುದೆಂದು ಕೋಲಾರ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಾಥ್ ತಿಳಿಸಿದ್ದಾರೆ.

ವಾರ್ಷಿಕ ಪರೀಕ್ಷೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸ ಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದ ವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಪರೀಕ್ಷೆ ಪ್ರವೇಶಪತ್ರವನ್ನು ತೋರಿಸಿ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net