ಪಿಎಂ ವಿಶ್ವಕರ್ಮ ಯೋಜನೆ/ ಕುಶಲಕರ್ಮಿಗಳ ನೋಂದಣಿಯಲ್ಲಿ ಕೋಲಾರ ಜಿಲ್ಲೆ ಭಾರತಕ್ಕೆ ಮುಂಚೂಣಿಯಲ್ಲಿದೆ/ಜಿಲ್ಲಾಧಿಕಾರಿ ಅಕ್ರಂ ಪಾಷ

Published on

ವಿಜಯವಾಣಿ ಸುದ್ದಿಜಾಲ ಕೋಲಾರ
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯಾದ ಪಿಎಂ ವಿಶ್ವಕರ್ಮ ಯೋಜನೆಯಡಿ ಕೋಲಾರ ಜಿಲ್ಲೆಯ ಕುಶಲಕರ್ಮಿಗಳು ಅತಿಹೆಚ್ಚು ನೋಂದಣಿಯಾಗಿರುತ್ತಾರೆ ಎಂದು ಭಾರತ ಸರ್ಕಾರದ ಅಂಕಿ-ಅAಶಗಳು ತಿಳಿಸಿವೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ತಿಳಿಸಿದರು.

ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ಶನಿವಾರ ನೋಂದಣಿಯಾದ ಕುಶಲಕರ್ಮಿಗಳಿಗೆ ತರಬೇತಿ ನೀಡುವ ಕುರಿತು ಜಿಲ್ಲೆಯ ವಿವಿಧ ಸಂಘ-ಸAಸ್ಥೆಗಳೊAದಿಗೆ ಏರ್ಪಡಿಸಲಾಗಿದ್ದ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಈಗಾಗಲೇ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ ೭೦,೦೦೦ ಕ್ಕೂ ಅಧಿಕ ಕುಶಲಕರ್ಮಿಗಳು ಈ ಯೋಜನೆಯಡಿ ತರಬೇತಿಗಾಗಿ ನೋಂದಣಿಯಾಗಿದ್ದು, ಇವರುಗಳಲ್ಲಿ ಮೊದಲ ಅಂತದಲ್ಲಿ ೧೦,೦೦೦ ಕುಶಲಕರ್ಮಿಗಳಿಗೆ ತರಬೇತಿ ನೀಡಲು ಕೇಂದ್ರ ಸರ್ಕಾರಕ್ಕೆ ಮೂರು ಹಂತಗಳಲ್ಲಿ ಶಿಫಾರಸ್ಸು ಮಾಡಲಾಗಿದೆ. ಶಿಫಾರಸ್ಸು ಮಾಡಲಾದ ಎಲ್ಲರಿಗೂ ಏಳು ದಿನಗಳ ತರಬೇತಿ ನೀಡಲಾಗುವುದು. ಜೊತೆಗೆ ಆಯಾ ತರಬೇತಿಗನುಗುಣವಾಗಿ ರೂ.೧೫೦೦೦ ಗಳ ಮೌಲ್ಯದ ಕೌಶಲ್ಯ ಪರಿಕರಗಳನ್ನು ಹಾಗೂ ತರಬೇತಿಯ ನಂತರ ಪ್ರಮಾಣ ಪತ್ರವನ್ನು ಮತ್ತು ಗರಿಷ್ಠ ೩ ಲಕ್ಷಗಳ ವರೆಗೆ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ ಎಂದು ಅವರು ತಿಳಿಸಿದರು.

ಜಿಲ್ಲೆಯಲ್ಲಿ ವಿವಿಧ ಕರಕುಶಲ ತರಬೇತಿಗಾಗಿ ತರಬೇತಿ ಕೇಂದ್ರಗಳ ಕೊರತೆ ಇದ್ದು, ಭಾರತ ಸರ್ಕಾರವು ಖಾಸಗಿ ಸಹಭಾಗಿತ್ವದಲ್ಲಿ ತರಬೇತಿ ಸಂಸ್ಥೆಗಳನ್ನು ಗುರುತಿಸಲು ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಕೇವಲ ಜಿಲ್ಲಾ ಮಟ್ಟ ಮಾತ್ರವಲ್ಲದೆ, ತಾಲ್ಲೂಕು ಹಾಗೂ ಹೊಬಳಿ ಮಟ್ಟದಲ್ಲಿಯೂ ಸಹ ಕುಶಲಕರ್ಮಿಗಳಿಗೆ ಈ ಯೋಜನೆಯಡಿ ತರಬೇತಿ ನೀಡಲು ಯೋಜಿಸಲಾಗಿದೆ. ತರಬೇತಿ ಸಂಸ್ಥೆಗಳಿAದ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದ್ದು, ತರಬೇತಿ ನೀಡುವ ಸಂಸ್ಥೆಗಳು ಏಳು ದಿನಗಳ ತರಬೇತಿಗಾಗಿ ಕ್ರಿಯಾ ಯೋಜನೆಯನ್ನು ಸಿದ್ದಪಡಿಸಿ ಸಲ್ಲಿಸುವಂತೆ ತಿಳಿಸಿದರು.

ಈಗಾಗಲೇ ನಿರ್ಮಿತಿ ಕೇಂದ್ರದಿAದ ಗಾರೆ ಕೆಲಸದವರಿಗೆ ತರಬೇತಿಗಳನ್ನು ಆಯೋಜಿಸಲಾಗಿದೆ. ಉಳಿದಂತೆ ಬಡಗಿತನ, ದೋಣಿ ತಯಾರಿಕೆ, ಶಸ್ತ್ರಾಸ್ತ್ರ ತಯಾರಿಕೆ, ಸ್ವಯಂ ಉದ್ಯೋಗಿ ಕುಶಲಕರ್ಮಿಗಳು ಹಸ್ತ ಮತ್ತು ಸಾಂಪ್ರದಾಯಿಕ ಉಪಕರಣಗಳೊಂದಿಗೆ ಕತ್ತಿ, ಗುರಾಣಿ, ಚಾಕುಗಳು ಇತ್ಯಾದಿ ಶಸ್ತ್ರಾಸ್ತ್ರ ತಯಾರಿಕೆ, ದುರಸ್ತಿ ಮತ್ತು ಸೇವೆ ಒದಗಿಸುವ ಅಸಂಘಟಿತ ವಲಯದ ಕುಶಲಕರ್ಮಿಗಳು, ಕಮ್ಮಾರ, ಸುತ್ತಿಗೆ ಮತ್ತು ಟೂಲ್‌ಕಿಟ್ ತಯಾರಿಕೆ, ಬೀಗ ತಯಾರಕರು, ಶಿಲ್ಪಕಲೆ ಮತ್ತು ಕಲ್ಲುಕೆತ್ತನೆ ಮಾಡುವವರು, ಆಭರಣ ತಯಾರಿಕೆ (ಅಕ್ಕಸಾಲಿಗರು), ಕುಂಬಾರಿಕೆ, ಪಾದರಕ್ಷೆ ಮತ್ತು ಚರ್ಮಗಾರಿಕೆ ತಯಾರಿಕೆ, ಗೌಂಡಿ ಕೆಲಸಗಾರರು, ಕಸಬರಿಗೆ-ಬಾಸ್ಕೆಟ್-ಮ್ಯಾಟ್ ತಯಾರಿಕೆ ಮತ್ತು ತೆಂಗಿನ ನಾರಿನ ಉತ್ಪನ್ನ ತಯಾರಕರು, ಗೊಂಬೆ ತಯಾರಕರು, ಕ್ಷೌರಿಕ, ಹೂ-ಮಾಲೆ ತಯಾರಕರು, ಧೋಬಿ, ಟೈಲರ್, ಮೀನಿನ ಬಲೆಗಳನ್ನು ತಯಾರಿಸುವಂತಹ ಚಟುವಟಿಕೆಗಳಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ತರಬೇತಿ ನೀಡಬೇಕಾಗಿರುತ್ತದೆ ಎಂದರು.

ಪಿಎA ವಿಶ್ವಕರ್ಮ ಯೋಜನೆಯಡಿ ಜಿಲ್ಲೆಯಲ್ಲಿ ವಿವಿಧ ೧೮ ವೃತ್ತಿಗಳಲ್ಲಿ ತೊಡಗಿರುವ ಸ್ವಯಂ ಉದ್ಯೋಗಿಯಾಗಿರುವ ಕುಶಲಕರ್ಮಿಗಳು ವಿವಿಧ ಸವಲತ್ತು ಪಡೆಯಲು ಗ್ರಾಮ ಪಂಚಾಯತ್ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಸಾಮಾನ್ಯ ಸೇವಾ ಕೇಂದ್ರದ ಮೂಲಕ ನೋಂದಣಿ ಮಾಡಿಕೊಳ್ಳಬೇಕೆಂದು ಮನವಿ ಮಾಡಿದರು.

ಈ ಯೋಜನೆಯಡಿ ಕುಶಲಕರ್ಮಿಗಳಿಗೆ ಪಿ.ಎಂ. ವಿಶ್ವಕರ್ಮ ಪ್ರಮಾಣ ಪತ್ರ., ಐ.ಡಿ ಕಾರ್ಡ್, ಕೌಶಲ್ಯಾಭಿವೃದ್ಧಿ, ಉಪಕರಣಗಳಿಗೆ ಪ್ರೋತ್ಸಾಹ, ಕ್ರೇಡಿಟ್ ಸೌಲಭ್ಯ, ಡಿಜಿಟಲ್ ವ್ಯವಹಾರಕ್ಕೆ ಪ್ರೋತ್ಸಾಹ ಹಾಗೂ ಮಾರುಕಟ್ಟೆ ಬೆಂಬಲ ಸೌಲಭ್ಯಗಳಂತಹ ಸವಲತ್ತುಗಳನ್ನು ನೀಡಲಾಗುತ್ತದೆ ಎಂದರು.

ನೋAದಣಿಗೆ ಅರ್ಹತೆಗಳು:
೧೮ ವೃತ್ತಿಗಳಲ್ಲಿ ಯಾವುದಾದರೂ ಒಂದರಲ್ಲಿ ಸ್ವಯಂ ಉದ್ಯೋಗಿಯಾಗಿದ್ದು, ೧೮ ವರ್ಷ ಮೇಲ್ಪಟ್ಟವರಾಗಿರಬೇಕು. ಒಂದು ಕುಟುಂಬದಲ್ಲಿ ಒಬ್ಬ ಸದಸ್ಯರು ಮಾತ್ರ ನೊಂದಣಿಗೆ ಅರ್ಹರು. ಕುಟುಂಬದಲ್ಲಿ ಯಾವುದೇ ಸದಸ್ಯರು ಸರ್ಕಾರಿ ಕೆಲಸದಲ್ಲಿರಬಾರದು, ಕಳೆದ ೫ ವರ್ಷಗಳಲ್ಲಿ ಪಿಎಂಇಜಿಪಿ ಮತ್ತು ಮುದ್ರಾ ಹಾಗೂ ಪಿಎಂ-ಸ್ವನಿಧಿ ಸಾಲಗಳನ್ನು ಪಡೆದಿರಬಾರದು. ಮುದ್ರಾ ಮತ್ತು ಪಿಎಂ-ಸ್ವನಿಧಿ ಯೋಜನೆಗಳಲ್ಲಿ ಸಾಲ ಪಡೆದು ಪೂರ್ಣ ಮರುಪಾವತಿ ಮಾಡಿದ ಕುಶಲಕರ್ಮಿಗಳು ಯೋಜನೆಯ ಲಾಭ ಪಡೆಯಲು ಅರ್ಹರಾಗಿರುತ್ತಾರೆ.

ಯೋಜನೆಯಡಿ ನೋಂದಣಿಯಾದ ಕುಶಲಕರ್ಮಿಗಳಿಗೆ ಜಿಲ್ಲಾ ಮಟ್ಟದ ಸಮಿತಿಯಿಂದ ಕುಶಲಕರ್ಮಿ ಎಂದು ದೃಢೀಕರಿಸಿದ ನಂತರ ೫ ರಿಂದ ೭ ದಿನಗಳ ಕಾಲ ತರಬೇತಿಯನ್ನು ನೀಡಲಾಗುವುದು. ತರಬೇತಿ ಅವಧಿಯಲ್ಲಿ ಸ್ಟೆಫಂಡ್ ಮತ್ತು ಇತರೆ ಭತ್ಯೆ ನೀಡಲಾಗುತ್ತದೆ. ತರಬೇತಿ ನಂತರ ಪ್ರಮಾಣ ಪತ್ರದೊಂದಿಗೆ ೧೫,೦೦೦ ರೂ. ಬೆಲೆಬಾಳುವ ಉಪಕರಣ ನೀಡಲಾಗುತ್ತದೆ.

ಇದಲ್ಲದೆ ತರಬೇತಿ ಪಡೆದ ಕುಶಲಕರ್ಮಿಗಳಿಗೆ ಶೇ.೫ ಬಡ್ಡಿದರದಲ್ಲಿ ೧ ಲಕ್ಷ ರೂ. ಸಾಲ ನೀಡಲಾಗುವುದು. ತದನಂತರ ೧೫ ದಿನಗಳ ವರೆಗೆ ಉನ್ನತ ಮಟ್ಟದ ತರಬೇತಿ ನೀಡಿ ಮೊದಲು ಪಡೆದ ೧ ಲಕ್ಷ ರೂ. ಸಾಲ ಮರುಪಾವತಿಯಾದ ನಂತರ ಶೇ.೫ರ ಬಡ್ಡಿ ದರದಲ್ಲಿಯೇ ೨ ಲಕ್ಷ ರೂ. ಸಾಲ ನೀಡುವುದರ ಜೊತೆಗೆ ಕುಶಲಕರ್ಮಿಗಳಿಂದ ತಯಾರಿಸಲ್ಪಡುವ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ಸಹ ಕಲ್ಪಿಸಲಾಗುತ್ತದೆ. ಕುಶಲಕರ್ಮಿಗಳು ಸಂಬAಧಿಸಿದ ತಮ್ಮ ಗ್ರಾಮ ಪಂಚಾಯತ್ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸ್ಥಾಪಿತವಾಗಿರುವ ಸಾಮಾನ್ಯ ಸೇವಾ ಕೇಂದ್ರದಲ್ಲಿ ತ್ವರಿತವಾಗಿ ನೊಂದಣಿ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಕೈಗಾರಿಕ ಕೇಂದ್ರದ ಜಂಟಿ ನಿರ್ದೇಶಕ ನಾಗೇಶ್, ಉಪನಿರ್ದೇಶಕ ರವಿಚಂದ್ರ, ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕ ಮಂಜುನಾಥ್, ಜಿಲ್ಲಾ ಕೌಶಲ್ಯಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ನಿರ್ಮಿತಿ ಕೇಂದ್ರದ ಅಧಿಕಾರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಚಿತ್ರ ೦೬ ಕೆ.ಎಲ್.ಆರ್. ೦೩ : ಜಿಲ್ಲಾಧಿಕಾರಿ ಅಕ್ರಂಪಾಷ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಪಿ.ಎಂ.ವಿಶ್ವಕರ್ಮ ನೋಂದಣಿಯಾದ ಕುಶಲಕರ್ಮಿಗಳಿಗೆ ತರಬೇತಿ ನೀಡುವ ಕುರಿತು ನಡೆದ ಸಭೆ, ಜಿಲ್ಲಾ ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕರ ನಾಗೇಶ್, ಉಪನಿರ್ದೇಶಕ ರವಿಚಂದ್ರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net