ಪಿಎಸಿಎಸ್‌ಗೆ ಕೆ.ಟಿ.ಮಂಜುನಾಥ್ ಅಧ್ಯಕ್ಷ

1 nrp 4 election
ಎನ್.ಆರ್.ಪುರ ವಿಎಸ್‌ಎಸ್‌ಎನ್ ಅಧ್ಯಕ್ಷ ಕೆ.ಟಿ.ಮಂಜುನಾಥ್ ಹಾಗೂ ಉಪಾಧ್ಯಕ್ಷ ಅಜಂತ ಅವರನ್ನು ಬಿಜೆಪಿ ಮುಖಂಡರು ಅಭಿನಂದಿಸಿದರು. ಎನ್.ಎಂ.ಕಾಂತರಾಜ್, ವೈ.ಎಸ್.ರವಿ, ರಂಗನಾಥ್, ಹಂಚಿನಮನೆ ರಾಘವೇಂದ್ರ ಇತರರಿದ್ದರು.
Published on

ಎನ್.ಆರ್.ಪುರ: ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಕೆ.ಟಿ.ಮಂಜುನಾಥ್ ಹಾಗೂ ಉಪಾಧ್ಯಕ್ಷರಾಗಿ ಎನ್.ಎಸ್.ಅಜಂತ ಶುಕ್ರವಾರ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿ ಸಿ.ಜಿ.ಶಿವಕುಮಾರ್ ಕಾರ್ಯ ನಿರ್ವಹಿಸಿದರು.

ನಂತರ ಅಧ್ಯಕ್ಷ, ಉಪಾಧ್ಯಕ್ಷರ ಅಭಿನಂದನೆ ಕಾರ್ಯಕ್ರಮದಲ್ಲಿ ತಾಲೂಕು ಬಿಜೆಪಿ ವಕ್ತಾರ ಎನ್.ಎಂ.ಕಾಂತರಾಜ್ ಮಾತನಾಡಿ, ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿದ್ದಾರೆ. ಸಹಕಾರ ಸಂಘದ ಅಭಿವೃದ್ಧಿಗಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಿ ರೈತರಿಗೆ ಅನುಕೂಲ ಮಾಡಿಕೊಡಬೇಕು. ಹಿಂದಿನ ಅಧ್ಯಕ್ಷರ ಮಾರ್ಗದರ್ಶನ ಪಡೆದು ರೈತರಿಗೆ ಬೇಕಾದ ಗೊಬ್ಬರ, ಕೃಷಿ ಉಪಕರಣಗಳನ್ನು ಮಾರಾಟ ಮಾಡಬೇಕು ಎಂದು ಸಲಹೆ ನೀಡಿದರು.

ನೂತನ ಅಧ್ಯಕ್ಷ ಕೆ.ಟಿ.ಮಂಜುನಾಥ್ ಮಾತನಾಡಿ, ಚುನಾವಣೆಯಲ್ಲಿ ಮಾಜಿ ಸಚಿವ ಡಿ.ಎನ್.ಜೀವರಾಜ್ ಹಾಗೂ ಎಲ್ಲ ಬಿಜೆಪಿ ಮುಖಂಡರು ಒಟ್ಟಾಗಿ ನನ್ನನ್ನು ಗೆಲ್ಲಿಸಿದ್ದಾರೆ. ನನ್ನನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದರಿಂದ ಜವಾಬ್ದಾರಿ ಹೆಚ್ಚಾಗಿದೆ ಎಂದರು. ಸಂಘದ ಸಿಇಒ ಶ್ರೀಕಾಂತ್, ಬಿ.ಎಸ್.ಆಶೀಶ್‌ಕುಮಾರ್, ಡಿ.ಆರ್.ಈಶ್ವರ್, ರಶ್ಮಿ ದಯಾನಂದ್, ಸವಿತಾ ರತ್ನಾಕರ್, ಹಂಚಿನಮನೆ ರಾಘವೇಂದ್ರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net