ಪಿಡಿಒ ಗ್ರಾಪಂ ಸದಸ್ಯೆ ವಿರುದ್ಧ ನಗರದಲ್ಲಿ ಪ್ರತಿಭಟನೆ

8
Published on

ಚಾಮುಂಡಿಬೆಟ್ಟ ಗ್ರಾಮ ಪಂಚಾಯಿತಿಯ ಪಿಡಿಒ ಹಾಗೂ ಗ್ರಾಮ ಪಂಚಾಯಿತಿ ಸದಸ್ಯೆ ವಿರುದ್ಧ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ರಕ್ಷಣಾ ಸಮಿತಿ ವತಿಯಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.

ನಗರ ತಾಲೂಕು ಕಚೇರಿ ಮುಂಭಾಗ ಜಮಾವಣೆಗೊಂಡ ಪ್ರತಿಭಟನಾಕಾರರು, ನಾನಾ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಚಾಮುಂಡಿಬೆಟ್ಟ ಗ್ರಾಮ ಪಂಚಾಯಿತಿಯ ಪಿಡಿಒ ರೂಪೇಶ್ ತಮಗೆ ಅಧಿಕಾರ ಇಲ್ಲದಿದ್ದರೂ ಸರ್ವೇ ನಂ.64/1ಕ್ಕೆ ಖಾತೆ ಮಾಡಿ ಕಾನೂನು ಉಲ್ಲಂಘನೆ ಮಾಡಿದ್ದಾರೆ. ಚಾಮುಂಡಿಬೆಟ್ಟ ಗ್ರಾಮ ಪಂಚಾಯಿತಿ ಸದಸ್ಯರ ಚುನಾವಣೆಯಲ್ಲಿ ಸುಳ್ಳು ದಾಖಲಾತಿಗಳನ್ನು ಸರ್ಕಾರಕ್ಕೆ ಸಲ್ಲಿಸಿ ಚುನಾವಣೆಯಲ್ಲಿ ಗೆದ್ದಿರುವ ಅಂಬಿಕಾ ಪಂಚಾಯಿತಿ ಜಾಗವನ್ನು ಒತ್ತುವರಿ ಮಾಡಿ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ. ಅನುಮತಿ ಪಡೆಯದೆ ಮನೆ ಕಟ್ಟಿ ಗೃಹಪ್ರವೇಶಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ದೂರಿದರು.

ಪ್ರತಿಭಟನೆಯಲ್ಲಿ ವಿ.ಪಿ.ಸುಶೀಲಾ, ಎಂ.ಪುಟ್ಟರಾಜು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net