ಶೇ.41.28 ವಿದ್ಯಾರ್ಥಿಗಳು ಉತ್ತೀರ್ಣ ಬೆಂಗಳೂರು ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸಿದ್ದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಲಿತಾಂಶವನ್ನು ಶುಕ್ರವಾರ ಪ್ರಕಟಿಸಿದ್ದು, ಈ ವರ್ಷ ಶೇ.41.28 ಲಿತಾಂಶ ಪ್ರಕಟಗೊಂಡಿದೆ. ಈ ಬಾರಿ ಪೂರಕ ಪರೀಕ್ಷೆಗೆ ಒಟ್ಟು 2,12,678 ವಿದ್ಯಾರ್ಥಿಗಳು ಹಾಜರಾಗಿದ್ದರು. ಇವರಲ್ಲಿ 87,784 ಜನರು ಉತ್ತೀರ್ಣರಾಗಿದ್ದಾರೆ. ಒಟ್ಟು 305 ಪರೀಕ್ಷಾ ಕೇಂದ್ರದಲ್ಲಿ ನಡೆಸಲಾಗಿದ್ದ ನಗರಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಮೇಲುಗೈ ಸಾಧಿಸಿದ್ದು, ನಗರದಲ್ಲಿ ಉತ್ತೀರ್ಣ ಪ್ರಮಾಣ ಶೇ.39.95 ಆಗಿದ್ದರೆ, ಗ್ರಾಮೀಣ ಭಾಗದಲ್ಲಿ ಶೇ.45.78 ಕಂಡುಬಂದಿದೆ. ವಿದ್ಯಾರ್ಥಿಗಳು ಡಿಡಿಡಿ.ಚ್ಟ್ಟಛಿಠ್ಠ್ಝಠಿ.್ಞಜ್ಚಿ.ಜ್ಞಿ ನಲ್ಲಿ ಲಿತಾಂಶ ಪಡೆಯಬಹುದು. ಉತ್ತರ ಪತ್ರಿಕೆಯ ಪ್ರತಿಗಾಗಿ ಅರ್ಜಿ ಸಲ್ಲಿಸಲು ಅ.10 ರಿಂದ 16ರ ಅವಕಾಶ ನೀಡಲಾಗಿದೆ. ಪ್ರತಿ ವಿಷಯಕ್ಕೆ 530 ರೂ. ಶುಲ್ಕ ಪಾವತಿಸಿ ಅ.14ರಿಂದ 19ರ ವರೆಗೆ ಡಿಡಿಡಿ.ಟ್ಠಛಿ.ಚ್ಟ.್ಞಜ್ಚಿ.ಜ್ಞಿ ಅರ್ಜಿ ಸಲ್ಲಿಸಿ ಪ್ರತಿ ಪಡೆಯಬಹುದು. ಸ್ಕಾೃನ್ ಪ್ರತಿ ಪಡೆದವರಿಗೆ ಮಾತ್ರ ಮರುಮೌಲ್ಯಮಾಪನ ಹಾಗೂ ಮರುಎಣಿಕೆಗೆ ಅರ್ಜಿ ಸಲ್ಲಿಸಲು ಅವಕಾಶವಿರಲಿದೆ. ಅ.19 ರಿಂದ 23ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಪ್ರತಿ ವಿಷಯದ ಮರುಮೌಲ್ಯಮಾಪನಕ್ಕೆ 1,670 ರೂ. ಶುಲ್ಕ ನಿಗದಿಯಾಗಿದೆ. ಅಂಕ ಮರು ಎಣಿಕೆಗೆ ಶುಲ್ಕ ಇರುವುದಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.