ವಿಜಯವಾಣಿ ಸುದ್ದಿಜಾಲ ಉಡುಪಿ
ಕರೋನಾ ಪಾಸಿಟಿವ್ ಹಿನ್ನಲೆಯಲ್ಲಿ ಜುಲೈ 20 ರಂದು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ
ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ರೋಗದಿಂದ ಸಂಪೂರ್ಣ ಗುಣಮುಖರಾಗಿದ್ದು ಅಸ್ಪತ್ರೆಯಿಂದ ಬಿಡುಗಡೆಗೊಂಡು ಉಡುಪಿ ಪಾಡಿಗಾರು ಮಠಕ್ಕೆ ಶನಿವಾರ ಮಧ್ಯಾಹ್ನ ಆಗಮಿಸಿದ್ದಾರೆ.
.ಈಗ ಶ್ರೀಗಳ ಆರೋಗ್ಯ ಸ್ಥಿರವಾಗಿದ್ದು, ತುಸುಕಾಲ ವಿಶ್ರಾಂತಿಯಲ್ಲಿ ಇರಲಿದ್ದಾರೆ ಎಂದು ಮಠದ ಪ್ರಕಟಣೆ ತಿಳಿಸಿದೆ.