

ಚಿತ್ರದುರ್ಗ: ಹಾಸನದ ಪೆನ್‌ಡ್ರೈವ್ ಪ್ರಕರಣಕ್ಕೂ, ರಾಜ್ಯ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಹೊಳೆನರಸೀಪುರದಲ್ಲಿ ಮೈತ್ರಿ ಪಕ್ಷಗಳ ನಡುವೆ ನಡೆಯುತ್ತಿದ್ದ ಮುಸುಕಿನ ಗುದ್ದಾಟ ಪೆನ್‌ಡ್ರೈವ್ ಮೂಲಕ ರಾಜ್ಯ, ರಾಷ್ಟ್ರಮಟ್ಟದಲ್ಲಿ ಬಯಲಾಗಿದೆ. ವಕೀಲ ದೇವರಾಜೇಗೌಡ ರಾಜಕೀಯ ಪಕ್ಷದ ಜೊತೆಗೆ ಗುರುತಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ. ಅವರ ಆರೋಪ ಸತ್ಯಕ್ಕೆ ದೂರ ಎಂದರು.
ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನವಾಗುವುದಿಲ್ಲ. ಬಿಜೆಪಿ-ಜೆಡಿಎಸ್ ಶಾಸಕರು ಸೇರಿದರೂ ಸರ್ಕಾರ ರಚಿಸಲು ಸಾಧ್ಯವಿಲ್ಲ. ಸಂಪುಟ ಪುನರ್ ರಚನೆ ಹೈಕಮಾಂಡ್‌ಗೆ ಬಿಟ್ಟ ವಿಚಾರ. ವರಿಷ್ಠರ ತೀರ್ಮಾನವೇ ಅಂತಿಮ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಇದಕ್ಕೂ ಮುನ್ನ ಎಂಎಲ್ಸಿ ಚುನಾವಣೆ ಸಂಬಂಧ ಕೈ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಪರ ಎಸ್‌ಆರ್‌ಎಸ್ ಶಿಕ್ಷಣ ಸಂಸ್ಥೆಯಲ್ಲಿ
ಮತಯಾಚನೆ ಮಾಡಿದರು. ನಂತರ ಖಾಸಗಿ ಹೋಟೆಲ್‌ನಲ್ಲಿ ಕಾರ್ಯಕರ್ತರ ಸಭೆ ನಡೆಸಿದರು.