ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

stack-of-school-education-text-books-clip-art-59406
Published on

ಕರ್ನಾಟಕ ರಾಜ್ಯ ಶಿವಾರ್ಚಕ ಕ್ಷೇಮಾಭಿವೃದ್ಧಿ ಟ್ರಸ್ಟ್‌ನಿಂದ 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಟ್ರಸ್ಟ್ ಸಂಘಟನಾ ಕಾರ್ಯದರ್ಶಿ ತಗಡೂರು ಗಣೇಶ್ ತಿಳಿಸಿದರು.

ಎಸ್‌ಎಸ್‌ಎಲ್‌ಸಿಯಲ್ಲಿ ಶೇ.90ಕ್ಕಿಂತ, ಪಿಯುಸಿಯಲ್ಲಿ ಶೇ.85ಕ್ಕಿಂತ ಅಧಿಕ ಅಂಕ ಪಡೆದವರು ಅಂಕಪಟ್ಟಿ, ಆಧಾರ್ ಜೆರಾಕ್ಸ್, 2 ಭಾವಚಿತ್ರಗಳೊಂದಿಗೆ ಅರ್ಜಿ ಸಲ್ಲಿಸಬಹುದು. ನಗದು ಪುರಸ್ಕಾರ ನೀಡಲಾಗುತ್ತದೆ. ಜುಲೈ 13ರಂದು ಬೆಳಗ್ಗೆ 10.30ಕ್ಕೆ ನಟರಾಜ ಪ್ರತಿಷ್ಠಾನ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮಾಹಿತಿಗೆ ಮೊ.99649 67554 ಸಂಪರ್ಕಿಸಬಹುದು ಎಂದರು. ಸುದ್ದಿಗೋಷ್ಠಿಯಲ್ಲಿ ಟ್ರಸ್ಟ್ ಸಹ ಕಾರ್ಯದರ್ಶಿ ಎಂ.ಮನೋಹರ್, ಖಜಾಂಚಿ ಈ.ವಾಮದೇವ, ಕಾನೂನು ಸಲಹೆಗಾರ ಕೆ.ಎ.ಪಂಚಲಿಂಗಯ್ಯ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net