

ಮೈಸೂರು: ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಒಕ್ಕಲಿಗರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
2024-25ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 95ಕ್ಕಿಂತ ಹೆಚ್ಚು ಹಾಗೂ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ 93ಕ್ಕಿಂತ ಅಧಿಕ ಅಂಕ ಗಳಿಸಿರುವ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಒಕ್ಕಲಿಗ ಸಮಾಜದ ವಿದ್ಯಾರ್ಥಿಗಳು ಜೂನ್ 24ರೊಳಗೆ ಅರ್ಜಿಯನ್ನು ವಿದ್ಯಾರಣ್ಯಪುರಂನ ಸಂಘದ ಕಚೇರಿಗೆ ಸಲ್ಲಿಸಬೇಕು. ಅಂಕಪಟ್ಟಿಯ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್ ಪ್ರತಿ, ಜಾತಿ ಪ್ರಮಾಣ ಪತ್ರದ ಪ್ರತಿ ಹಾಗೂ ಪಾಸ್‌ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರವನ್ನು ನೀಡಬೇಕು ಎಂದು ಪ್ರಧಾನ ಕಾರ್ಯದರ್ಶಿ ಎಂ.ಇ. ಚೇತನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೂನ್ 27ರಂದು ಕಲಾಮಂದಿರದಲ್ಲಿ ನಡೆಯುವ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಪುರಸ್ಕಾರ ನೀಡಲಾಗುವುದು.