ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ

mnd Books
Published on

ರೋಟರಿ ಮೈಸೂರು ಮಿಟ್‌ಟೌನ್ ವತಿಯಿಂದ ಜು.16ರಂದು ಸಂಜೆ 6.30ಕ್ಕೆ ಜೆಎಲ್‌ಬಿ ರಸ್ತೆ ರೋಟರಿ ಸಭಾಂಗಣದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಇಬ್ಬರು ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುತ್ತಿದೆ ಎಂದು ಅಧ್ಯಕ್ಷ ರಾಕೇಶ್ ಬಾಬು ತಿಳಿಸಿದರು.

ಎಸ್‌ಎಸ್‌ಎಲ್‌ಸಿಯಲ್ಲಿ 623 ಅಂಕ ಪಡೆದ ಎಂ.ಎಸ್.ನಮನಶ್ರೀ ಹಾಗೂ ಪಿಯುಸಿಯಲ್ಲಿ 582 ಅಂಕ ಗಳಿಸಿದ ಕೃತಿಕ್ ಸಿ.ಅರಸ್ ಅವರಿಗೆ ತಲಾ 10 ಸಾವಿರ ನಗದು ಬಹುಮಾನ ನೀಡಲಾಗುವುದು. ಅವರಿಗೆ ಮಾಜಿ ಎಂಎಲ್ಸಿ ಮರಿತಿಬ್ಬೇಗೌಡ ಪುರಸ್ಕರಿಸುವರು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net