ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಇರಲಿ

18 nrp 1 kanunu
ಎನ್.ಆರ್.ಪುರ ತಾಲೂಕು ಅಳಲಗೆರೆ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಕೆ.ಟಿ.ರಘುನಾಥ್ ಗೌಡ ಗಿಡಕ್ಕೆ ನೀರೆರೆದು ಉದ್ಘಾಟಿಸಿದರು. ಎಸ್.ಎಸ್.ಸಂತೋಷ್‌ಕುಮಾರ್, ಕಾರ್ತಿಕೇಯನ್, ಪೂರ್ಣೇಶ್, ಪೂರ್ಣಿಮಾ, ಮಹಾತ್ಮಾಗಾಂಧಿ, ಮಕ್ಕಳು ಇದ್ದರು.
Published on

ಎನ್.ಆರ್.ಪುರ: ಸಮಾಜದಲ್ಲಿನ ಪ್ರತಿಯೊಬ್ಬರಿಗೂ ಕಾನೂನಿನ ಅರಿವಿರಬೇಕು. ನನಗೆ ಕಾನೂನಿನ ಅರಿವಿಲ್ಲ ಎಂದು ಅಪರಾಧ ವೆಸಗಿದರೆ ಕ್ಷಮೆ ಇಲ್ಲ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಕೆ.ಟಿ.ರಘುನಾಥ್ ಗೌಡ ಹೇಳಿದರು.

ಅಳಲಗೆರೆ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಏರ್ಪಡಿಸಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಕ್ಕಳು ಮೊಬೈಲ್ ಗೀಳಿಗೆ ಒಳಗಾಗದೆೆ ಅಗತ್ಯವಿದ್ದರೆ ಮಾತ್ರ ಉಪಯೋಗಿಸಿಕೊಳ್ಳಬೇಕು. ವ್ಯಾಟ್ಸ್‌ಆ್ಯಪ್, ೇಸ್‌ಬುಕ್‌ಗಳಲ್ಲಿ ಹೆಣ್ಣು ಮಕ್ಕಳು, ಮಹಿಳೆಯರು ೆಟೋಗಳನ್ನು ವಿನಾಕಾರಣ ಹಾಕಬಾರದು. ಅಪ್ರಾಪ್ತ ಮಕ್ಕಳಿಗೆ ವಾಹನ ನೀಡಿದರೆ ಅವರ ಪಾಲಕರಿಗೆ ದಂಡ ವಿಧಿಸಲಾಗುವುದು ಎಂದರು.

ಬಾಲ್ಯವಿವಾಹ ಆಗುತ್ತಿದ್ದರೆ ಕೂಡಲೇ ಕಾನೂನು ಸೇವೆಗಳ ಸಮಿತಿ ಅಥವಾ ಸಿಡಿಪಿಒ ಅವರಿಗೆ ಮಾಹಿತಿ ನೀಡಿ. ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿಡಲಾಗುವುದು. ಎಲ್ಲರೂ ಕಾನೂನನ್ನು ಸರಿಯಾದ ರೀತಿಯಲ್ಲಿ ಪಾಲನೆ ಮಾಡಿದರೆ ಅಪರಾಧಗಳನ್ನು ನಿಯಂತ್ರಿಸಬಹುದಾಗಿದೆ. ದ್ವಿಚಕ್ರ ವಾಹನಗಳನ್ನು ಚಲಾಯಿಸುವಾಗ ಕಡ್ಡಾಯವಾಗಿ ಜೀವ ರಕ್ಷಣೆಗಾಗಿ ಹೆಲ್ಮೆಟ್ ಧರಿಸಬೇಕು. ಮಕ್ಕಳು ವಿದ್ಯಾರ್ಥಿ ದಿಸೆಯಿಂದಲೇ ಕಾನೂನಿನ ಅರಿವು ಹೊಂದಬೇಕು ಎಂದು ಹೇಳಿದರು.

ವಕೀಲ ಎಸ್.ಎಸ್.ಸಂತೋಷ್‌ಕುಮಾರ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಜನರನ್ನು ವಂಚಿಸಿ ಹಣ ದೋಚುವಂತಹ ಕೃತ್ಯಗಳು ಹೆಚ್ಚಾಗುತ್ತಿವೆ. ಉಪಯೋಗಕ್ಕೆ ಬೇಕಾದಷ್ಟು ಮಾತ್ರ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳಿ. ಅಪ್ರಾಪ್ತರು ಪ್ರೀತಿ, ಪ್ರೇಮದ ಮೋಹದ ಬಲೆಗೆ ಬಿದ್ದು ಗರ್ಭಧರಿಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಹೆಣ್ಣು ಮಕ್ಕಳು ಅತ್ಯಂತ ಜಾಗರೂಕರಾಗಿರಬೇಕು. ಜೀವನದಲ್ಲಿ ಒಳ್ಳೆಯ ಗುರಿ ಇಟ್ಟುಕೊಂಡು, ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ತಿಳಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ಕೆ.ಟಿ.ರಘುನಾಥ್ ಗೌಡ ಅವರು ಮಕ್ಕಳೊಂದಿಗೆ ಕಾನೂನಿನ ಕುರಿತು ಸಂವಾದ ನಡೆಸಿದರು. ತಾಲೂಕು ಕಾನೂನು ಸೇವಾ ಸಮಿತಿ ಕಾರ್ಯದರ್ಶಿ ಕಾರ್ತಿಕೇಯನ್, ಮುರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಚಾರ್ಯೆ ಪೂರ್ಣಿಮಾ, ಶಿಕ್ಷಕ ಮಹಾತ್ಮಾಗಾಂಧಿ, ವಸತಿಶಾಲೆ ಮಕ್ಕಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net