ಪ್ರತಿಯೊಬ್ಬರು ಗ್ರಾಮದ ಸ್ವಚ್ಛತೆಗೆ ಶ್ರಮಿಸಲಿ

LXR CHALANE
Published on

ಲಕ್ಷೆ್ಮೕಶ್ವರ: ಸ್ವಚ್ಛ ಭಾರತ ಅಭಿಯಾನ ಯೋಜನೆಯಡಿ ಗ್ರಾಮದಲ್ಲಿನ ಕಸ ಸಾಗಣೆ ವಾಹನ ಚಾಲನೆಗೆ ಮಹಿಳೆಯರು ಸಾರಥ್ಯ ವಹಿಸಿರುವುದು ಹೆಮ್ಮೆಯ ಸಂಗತಿ ಮತ್ತು ಎಂದು ತಾಲೂಕು ಪಂಚಾಯಿತಿ ನೋಡಲ್ ಅಧಿಕಾರಿ ಎಂ.ವಿ. ಚಳಗೇರಿ ಹೇಳಿದರು.

ತಾಲೂಕಿನ ಅಡರಕಟ್ಟಿ ಗ್ರಾಮದಲ್ಲಿ ಗುರುವಾರ ಮಹಿಳೆಯರಿಗೆ ಕಸ ಸಾಗಾಣಿಕೆ ವಾಹನದ ಕೀಲಿ ನೀಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ತಾಲೂಕಿನಲ್ಲಿ 8 ಗ್ರಾಮದ ಕಸ ಸಾಗಾಣಿಕೆ ವಾಹನಗಳಿಗೆ ಮಹಿಳೆಯರೇ ಚಾಲಕರಾಗಿ ಕಾರ್ಯ ನಿರ್ವಹಿಸುವ ಮೂಲಕ ಮಹಿಳೆಯರ ಸ್ವಾವಲಂಬಿ ಬದುಕಿಗೆ ಪ್ರೇರಣೆಯಾಗಿದ್ದಾರೆ. ಗ್ರಾಮದ ಪ್ರತಿ ಮನೆಯಿಂದ ಒಣ ಕಸ/ ಹಸಿ ಕಸವನ್ನು ಪ್ರತ್ಯೇಕವಾಗಿ ಸಂಗ್ರಹಿಸಿ ಕಸ ವಿಲೇವಾರಿ ಘಟಕಕ್ಕೆ ಸಾಗಾಣಿಕೆ ಮಾಡುವ ಮೂಲಕ ಗ್ರಾಮದ ಸ್ವಚ್ಛತೆಗೆ ಶ್ರಮಿಸಲು ಮುಂದಾಗಿದ್ದಾರೆ ಎಂದರು.

ತಾಪಂ ಇಒ ಕೃಷ್ಣಪ್ಪ ಧರ್ಮರ ಮಾತನಾಡಿ, ಗ್ರಾಮೀಣ ಭಾಗದ ಜನರು ಕಸವನ್ನು ಎಲ್ಲೆಂದರಲ್ಲಿ ಚೆಲ್ಲದೆ ನಿಮ್ಮ ಮನೆ ಬಾಗಿಲಿಗೆ ಬರುವ ಕಸ ವಿಲೇವಾರಿ ವಾಹನಕ್ಕೆ ಹಾಕಬೇಕು. ಕಸ ಸಾಗಿಸುವ ವಾಹನ ಚಾಲನೆಯನ್ನು ಮಹಿಳೆಯರೇ ಮಾಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದರು.

ಗ್ರಾಪಂ ಅಧ್ಯಕ್ಷೆ ಪ್ರೇಮಕ್ಕ ಲಮಾಣಿ, ಉಪಾಧ್ಯಕ್ಷೆ ಕಾಶವ್ವ ದೊಡ್ಡಮನಿ, ನಿಂಗಪ್ಪ ಪ್ಯಾಟಿ, ಗಣೇಶ ನಾಯ್ಕ, ಸೋಮಣ್ಣ ಹವಳದ, ಕಮಲವ್ವ ಲಮಾಣಿ, ಹರೀಶ ಲಮಾಣಿ, ಪಿಡಿಒ ಸವಿತಾ ಸೋಮಣ್ಣನವರ, ಕಾರ್ಯದರ್ಶಿ ಎಸ್.ಕೆ. ಡಂಬಳ, ಕಸ ವಿಲೇವಾರಿ ವಾಹನದ ಚಾಲಕಿ ಮಂಜುಳಾ ಹರಿಜನ, ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net