ಪ್ರಥಮ ಸಿಇಟಿ ಅಣುಕು ಸಿದ್ದತಾ ಪರೀಕ್ಷೆ ವೀಕ್ಷಿಸಿದ; ಸಿಇಒ ರಾಹುಲ್ ಶಿಂಧೆ

IMG-20240824-WA0011.jpg
Published on

ಬೆಳಗಾವಿ: ಜಿಲ್ಲೆಯ ಎಲ್ಲ ಸರಕಾರಿ ಪದವಿ ಪೂರ್ವ ವಿದ್ಯಾಲಯಗಳಲ್ಲಿ ವಿಜ್ಞಾನ ವ್ಯಾಸಂಗ ಮಾಡುತ್ತಿರುವ ಜಿಲ್ಲೆಯ ಗ್ರಾಮೀಣ ಪ್ರದೇಶದ ಮತ್ತು ಆರ್ಥಿಕವಾಗಿ ದುರ್ಬಲರಾಗಿರುವ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಉನ್ನತಿಗಾಗಿ “ಸಿ.ಇ.ಟಿ.-ಸಕ್ಷಮ್” ಎಂಬ ವಿನೂತನ ಕಾರ್ಯಕ್ರಮವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಆರಂಭಿಸಿದ್ದಾರೆ.

ನಾಲ್ಕನೇ ಶನಿವಾರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಥಮ ಸಿಇಟಿ/ನೀಟ್ ಸಿದ್ಧತಾ ಪರೀಕ್ಷೆ ಸರದಾರ ಪದವಿ ಪೂರ್ವ ವಿದ್ಯಾಲಯದಲ್ಲಿ ಜರುಗಿತು. ವಿದ್ಯಾಲಯಕ್ಕೆ ಭೇಟಿ ನೀಡಿದ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪರೀಕ್ಷಾ ಕೊಠಡಿಯಲ್ಲಿ ಸಂಚರಿಸಿ ಪರೀಕ್ಷಾ ಪ್ರಕ್ರಿಯೆಯನ್ನು ವೀಕ್ಷಣೆ ಮಾಡಿದರು.

ಬಳಿಕ ಮಾತನಾಡಿದ ಅವರು, ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತ ಬೆಳಗಾವಿ ಹಾಗೂ ಪದವಿ ಪೂರ್ವ ಕಾಲೇಜು ಸಹಯೋಗದೊಂದಿಗೆ ನಾವು ಸಿಇಟಿ ಸಕ್ಷಮ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದ್ದೆವೆ ಹಾಗೂ ಬೆಳಗಾವಿ ಜಿಲ್ಲೆಯಲ್ಲಿನ ಸುಮಾರು 34 ವಿಜ್ಞಾನ ಕಾಲೇಜುಗಳಲ್ಲಿ CET-Saksham ಪರೀಕ್ಷೆ ಹಮ್ಮಿಕೊಂಡಿದ್ದು, ಇದರಲ್ಲಿ 3500 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯುತ್ತಿದ್ದಾರೆ ಈ ಪರೀಕ್ಷೆಯು ಓ.ಎಮ್.ಆರ್ ಆಧಾರಿತ ಆಗಿದ್ದು ಪರೀಕ್ಷೆ ಮುಗಿದಾದ ನಂತರ ಜಿಲ್ಲಾ/ತಾಲೂಕಾ/ಕಾಲೇಜುವಾರು ರ್ಯಾಂಕಿಂಗ್ ತೆಗೆಯಲಾಗುತ್ತದೆ. ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವುದು ಹಾಗೂ ಸಿಇಟಿ ಭಯ ಹೋಗಲಾಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

ಪರೀಕ್ಷೆ ಆದ ಎರಡು ದಿನಗಳಲ್ಲಿ ಸೋಮವಾರ ಫಲಿತಾಂಶ ಪ್ರಕಟಿಸಲಾಗುವುದು ಅದಾದ ನಂತರ ಜಿಲ್ಲೆಯ ಎಲ್ಲ ವಿಜ್ಞಾನ ಸರಕಾರಿ ಪದವಿ ಪೂರ್ವ ವಿದ್ಯಾಲಯಗಳಲ್ಲಿ Doubt Clearing Sessions ನಡೆಸುವುದರ ಮೂಲಕ ಪರೀಕ್ಷಾ ವಿಶ್ಲೇಷಣೆ ಮಾಡಲಾಗುವುದು ಇದೊಂದು ಜಿಲ್ಲೆಯಲ್ಲಿ ವಿನೂತನವಾದ ಕಾರ್ಯಕ್ರಮವಾಗಿದ್ದು ಹಿರಿಯ ಅಧಿಕಾರಿ ಹಾಗೂ ಜನಪ್ರತಿನಿಧಿಗಳ ಸಹಕಾರದೊಂದಿಗೆ ಈ ಕಾರ್ಯಕ್ರಮ ಮಾಡುತ್ತಿದ್ದೆವೆ ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ರವರು ತಿಳಿಸಿದರು.

ಮುಂದುವರೆದು ಚುನಾವಣಾ ಸಾಕ್ಷರತಾ ಸಂಘ (ಇ.ಎಲ್.ಸಿ) ಕಾರ್ಯಚಟುವಟಿಕೆಗಳನ್ನು ಅವಲೋಕಿಸಿದರು.17 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರ್ಪಡಿಸುವಂತೆ ಸಂಬಂಧಪಟ್ಟ ಚುನಾವಣಾ ಇ.ಎಲ್.ಸಿ ನೋಡಲ್ ಅಧಿಕಾರಿಗೆ ನಿರ್ದೇಶನ ನೀಡಿದರು.ಅದರ ಜೊತೆಗೆ ಚುನಾವಣೆಗೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದುಕೊಂಡು ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪ್ರಾಚಾರ್ಯ ವೈ.ಎಮ್ ಪಾಟೀಲ್ , ಉಪನ್ಯಾಸಕ ವಿಜಯಕುಮಾರ ಹತ್ತಿ, ಇ.ಎಲ್.ಸಿ ನೋಡಲ್ ಅಧಿಕಾರಿ ಎಮ್ ಎಮ್ ಮುಲ್ಲಾ, ಪ್ರೌಡ ಶಾಲಾ ಮುಖ್ಯೋಪಾಧ್ಯಾಯ ಶಿವಾನಂದ ಹಾದಿಮನಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net