ಪ್ರಧಾನಿ ಆರೋಪ ಸತ್ಯಕ್ಕೆ ದೂರ

D.sudhakar dist minister--0002
Published on

ಚಿತ್ರದುರ್ಗ: ಮಹಾರಾಷ್ಟ್ರ ಚುನಾವಣೆಗೆ ಕರ್ನಾಟಕದ ಅಬಕಾರಿ ಇಲಾಖೆ ಹಣ ಬಳಕೆಯೊಂದಿಗೆ ಕಾಂಗ್ರೆಸ್‌ನಿಂದ ದುರುಪಯೋಗ ಎಂಬ ಪ್ರಧಾನಿ ನರೇಂದ್ರಮೋದಿ ಅವರ ಆರೋಪ ಸತ್ಯಕ್ಕೆ ದೂರ ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ಹೇಳಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಧಾನಿ ಅವರ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟವಾಗಿ ಉತ್ತರಿಸಿ, ಸವಾಲು ಹಾಕಿದ್ದಾರೆ. ನಾನೂ ಅಬಕಾರಿ ವಿಭಾಗದಲ್ಲಿ ಕೆಲಸ ಮಾಡಿದ್ದೇನೆ. ಅಗಾಧ ಪ್ರಮಾಣದಲ್ಲಿ ಭ್ರಷ್ಟಾಚಾರ ಎಸಗಲು ಸಾಧ್ಯವಿಲ್ಲ ಎಂದರು.

ಬಿಜೆಪಿ ಅವಧಿಯ ಕೋವಿಡ್ ಭ್ರಷ್ಟಾಚಾರ ಮೇಲ್ನೋಟಕ್ಕೆ ಕಾಣುತ್ತಿದೆ. ಬರೀ ಮಾಸ್ಕ್‌ಗೆ ಕೋಟ್ಯಂತರ ಬಿಲ್ ಹಾಕಲಾಗಿದೆ. ಯಾರೇ ಆಗಲಿ ಉಪ್ಪು ತಿಂದವರು ನೀರು ಕುಡಿಯಲಿದ್ದಾರೆ ಎಂದು ಪ್ರತಿಕ್ರಿಯಿಸಿದರು.

ಸಿದ್ದರಾಮಯ್ಯ ಅಧಿಕಾರ ಅಂತ್ಯ ಎಂಬುದಾಗಿ ಬಿಜೆಪಿ ನಾಯಕರಾದ ಬಿ.ವೈ.ವಿಜಯೇಂದ್ರ, ವಿ.ಸೋಮಣ್ಣ ಹೇಳುತ್ತಲೇ ಇದ್ದಾರೆ. ಆದರೆ, ಜನಪರ ಕಾರ್ಯಕ್ರಮಗಳ ಕುರಿತು ಚರ್ಚಿಸುತ್ತಿಲ್ಲ. ಕಾಂಗ್ರೆಸ್ ಆಡಳಿತ ಇನ್ನೂ ಮೂರುವರೆ ವರ್ಷವಿದ್ದು, ಯಾರು ಮುಂದುವರಿಯಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ತೀರ್ಮಾನಿಸಲಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net