ಪ್ರಭಾವಿಗಳ ವಿರುದ್ಧದ ಕೇಸ್ ಹಿಂಪಡೆದ ಕ್ರಮ ಪ್ರಶ್ನಿಸಿದ್ದ ಅರ್ಜಿ : ತೀರ್ಪು ಕಾಯ್ದಿರಿಸಿದ ಹೈಕೋರ್ಟ್

highcourt
Published on

ಬೆಂಗಳೂರು:  ರಾಜ್ಯದ ವಿವಿಧ ಸಂಘಟನೆಗಳ ಹೋರಾಟಗಾರರು, ರಾಜಕಾರಣಿಗಳು ಹಾಗೂ ಪ್ರಭಾವಿಗಳ ವಿರುದ್ಧ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ಹೋರಾಟಗಾರರು, ರಾಜಕಾರಣಿಗಳು, ಪ್ರಭಾವಿಗಳು ಹಾಗೂ ಮತ್ತಿತರರ ವಿರುದ್ಧ ದಾಖಲಾಗಿರುವ ವಿವಿಧ 43 ಪ್ರಕರಣಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರವು 2024ರ ಅ.10ರಂದು ಆದೇಶ ಹೊರಡಿಸಿತ್ತು.

ಸರ್ಕಾರದ ಈ ಕ್ರಮ ಆಕ್ಷೇಪಿಸಿ ಬೆಂಗಳೂರಿನ ವಕೀಲ ಗಿರೀಶ್ ಭಾರದ್ವಾಜ್ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ಪೀಠ ಆದೇಶ ನೀಡಿದೆ.

ಅರ್ಜಿದಾರರ ಪರ ವಕೀಲ ಪಿ. ವೆಂಕಟೇಶ್ ದಳವಾಯಿ ವಾದ ಮಂಡಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net