-ಸರ್ಕಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹ
ಪ್ರವಾಹ ಸಂತ್ರಸ್ಥರಿಗೆ ವಿಶೇಷ ಅನುದಾನ ೋಷಿಸಿ
ಸತತ ಎರಡು ವರ್ಷಗಳಿಂದ ನೆರೆಯಿಂದ ತತ್ತರಿಸಿರುವ ರಾಜ್ಯದ ರೈತರು ಈ ಬಾರಿ ಮತ್ತೆ ಮಳೆಯಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ, ಮನೆ-ಮಠ ಕಳೆದುಕೊಂಡು ನೆರೆಯಿಂದ ನೊಂದ ರೈತರ ನೆರವಿಗೆ ರಾಜ್ಯ ಸರ್ಕಾರ ಧಾವಿಸುವ ಮೂಲಕ ವಿಶ್ವಾಸ ತುಂಬುವ ಕೆಲಸವನ್ನು ಸಮರೋಪಾದಿಯಲ್ಲಿ ಕೈಗೆತ್ತಿಕೊಳ್ಳಬೇಕು ಎಂದು ಸಲಹೆ ಮಾಡಿದ್ದಾರೆ.
ರಾಜ್ಯದ ಉತ್ತರ ಕರ್ನಾಟಕ, ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಸಾಕಷ್ಟು ಪ್ರಮಾಣದಲ್ಲಿ ಬೆಳೆ ಹಾನಿಯಾಗಿದೆ. ಆಸ್ತಿ ನಷ್ಟ ಉಂಟಾಗಿದೆ. ಸರ್ಕಾರ ತಕ್ಷಣ ಸ್ಪಂದಿಸಿ ವಿಶೇಷ ಅನುದಾನ ಘೋಷಣೆ ಮಾಡಬೇಕು. ನೆರೆಪೀಡಿತ ಪ್ರದೇಶಗಳ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಅಧಿಕಾರಿಗಳು ಮತ್ತು ಸಚಿವರನ್ನು ತಕ್ಷಣವೇ ನಿಯೋಜಿಸಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಉಂಟಾಗಿರುವ ಬೆಳೆ ಹಾಗೂ ಆಸ್ತಿ ನಷ್ಟಕ್ಕೆ ಸರ್ಕಾರ ತಕ್ಷಣ ವಿಶೇಷ ಅನುದಾನ ೋಷಣೆ ಮಾಡಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ವಿಜಯವಾಣಿ ಸುದ್ದಿಜಾಲ ಬೆಂಗಳೂರು
ಕರೊನಾ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ನೆರೆಹಾವಳಿಯಿಂದ ರೈತರು ದಿಕ್ಕೆಟ್ಟುಹೋಗಿದ್ದಾರೆ. ಉಪಚುನಾವಣೆಗಳಿಗಿಂತ ರೈತರ ಸಂಕಷ್ಟಕ್ಕೆ ಆದ್ಯತೆಯ ಮೇರೆಗೆ ಸ್ಪಂದಿಸಿ ಸರ್ಕಾರ ತನ್ನ ಹೊಣೆಗಾರಿಕೆ ಪ್ರದರ್ಶಿಸಬೇಕಾದ ತುರ್ತು ಅಗತ್ಯವಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.