

ವಿಜಯಪುರ : ಪರಿಸರ ಪ್ರೇಮಿ ಎನ್.ಡಿ.ಪಾಟೀಲ ಅವರಿಗೆ ರಾಜ್ಯ ಸರ್ಕಾರ ನೀಡಿದ್ದ ಒಂದು ಲಕ್ಷ ರೂ. ಪ್ರಶಸ್ತಿ ಮೊತ್ತವನ್ನು ಸರ್ಕಾರದ ಪರಿಹಾರ ನಿಧಿಗೆ ಹಿಂದಿರುಗಿಸಿ ಮಾನವೀಯತೆ ಮೆರೆದಿದ್ದಾರೆ.
ಪರಿಸರ ಪೂರಕ ಚಟುವಟಿಕೆಯಲ್ಲಿ ಸೇವೆ ಸಲ್ಲಿಸಿದ ವಿಜಯಪುರದ ಎನ್.ಡಿ.ಪಾಟೀಲ ಅವರಿಗೆ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ಜತೆಗೆ 1 ಲಕ್ಷ ರೂ.ನಗದು ಹಾಗೂ 30 ಸಾವಿರ ರೂ. ಪ್ರವಾಸ ಭತ್ಯೆ ನೀಡಿದ್ದು, ಅದನ್ನು ಕರೊನಾ ಹಾಗೂ ನೆರೆ ಹಾವಳಿಯಿಂದ ತತ್ತರಿಸಿದ ಸಂತ್ರಸ್ತರಿಗೆ ನೆರವು ನೀಡುವಂತೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ವಾಪಸ್ ನೀಡಿದ್ದಾರೆ. ಶುಕ್ರವಾರ ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್ ಅವರನ್ನು ಭೇಟಿ ಮಾಡಿ, ಹಣವನ್ನು ಹಿಂದಿರುಗಿಸಿದ್ದಾರೆ. ಈ ವೇಳೆ ಗ್ರಾಮಿಣ ಅಭಿವೃದ್ಧಿ ಸಂಸ್ಥೆ ನಿರ್ದೇಶಕ ಡಾ.ಬಾಬು ಸಜ್ಜನ, ಖಾದಿ ಮಂಡಳಿ ಅಧ್ಯಕ್ಷ ಬಾಪುಗೌಡ ಪಾಟೀಲ, ಪಾಲಿಕೆ ಮಾಜಿ ಸದಸ್ಯ ಪ್ರೇಮಾನಂದ ಬಿರಾದಾರ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎನ್.ಕೆ ಬಾಗಾಯತ ಇತರರು ಉಪಸ್ಥಿತರಿದ್ದರು.