

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ಕಾಲೇಜು ವಿದ್ಯಾರ್ಥಿಗಳಿಗೆ 2024-25ನೇ ಸಾಲಿಗೆ ಪ್ರೋತ್ಸಾಹ ಧನಕ್ಕಾಗಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ದಿನಾಂಕವನ್ನು ಜೂನ್ 13 ರವರೆಗೆ ವಿಸ್ತರಿಸಲಾಗಿದೆ.
ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ಕಾಲೇಜು ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಉತ್ತೇಜಿಸಲು ಹಾಗೂ ಸದರಿ ಕಾರ್ಯಕ್ರಮದಡಿ ಪ್ರಯೋಜನ ಪಡೆಯಲು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ಕಾಲೇಜು ವಿದ್ಯಾರ್ಥಿಗಳು ಪ್ರೋತ್ಸಾಹಧನಕ್ಕಾಗಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವೆಬ್‌ಸೈಟ್ twd.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ “ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ, ಡಾ. ಬಾಬು ಜಗಜೀವನ್ ರಾಮ್ ಭವನ, ಆದಿಪಂಪ ರಸ್ತೆ, ಒಂಟಿಕೊಪ್ಪಲು ಪೂರ್ವ ಬಡಾವಣೆ, ಪಡುವಾರಹಳ್ಳಿ ಮೈಸೂರು ರವರಿಂದ ಪಡೆಯಬಹುದು ಹಾಗೂ ದೂ.ಸಂ:08212427140/9591122826 ನ್ನು ಸಂಪರ್ಕಿಸಬಹುದು ಎಂದು ಮೈಸೂರು ಜಿಲ್ಲೆಯ ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.