ಪ್ಲಾಸ್ಟಿಕ್ ಮುಕ್ತ ಭಾರತಕ್ಕಾಗಿ ಕೈ ಜೋಡಿಸಿ

2525
Published on

ಬೆಳಗಾವಿ: ಪ್ಲಾಸ್ಟಿಕ್ ಮುಕ್ತ ಭಾರತ ಮಾಡಲು ಎಲ್ಲರೂ ಕೈ ಜೋಡಿಸಬೇಕು. ನಮ್ಮ ಸುತ್ತ್ತಲಿನ ಪರಿಸರ ಸ್ವಚ್ಛ ಮಾಡಿ, ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ರೋಹಿತ ಕಲರಾ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ 75ನೇ ಸ್ವಾತಂತ್ರೊೃೀತ್ಸವದ ಅಮೃತ ಮಹೋತ್ಸವ ಅಂಗವಾಗಿ ಸೋಮವಾರ ನಗರದಲ್ಲಿ ಆಯೋಜಿಸಿದ್ದ ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸ್ವಚ್ಛ ಭಾರತ ಅಭಿಯಾನವನ್ನು ನಮ್ಮ ದೇಶದ ಸ್ವಾತಂತ್ರೊೃೀತ್ಸವದ ಅಮೃತ ಮಹೋತ್ಸವದ ಅಂಗವಾಗಿ ಅಕ್ಟೋಬರ್ 1ರಿಂದ ಅ.31ರವರೆಗೆ ಹಮ್ಮಿಕೊಳ್ಳಲಾಗಿದೆ. ಎಲ್ಲರೂ ಸ್ವಚ್ಛತೆ ಆದ್ಯತೆ ನೀಡಬೇಕು. ನಿರುಪಯುಕ್ತ ಪ್ಲಾಸ್ಟಿಕ್ ಸಂಗ್ರಹಿಸಿ ವಿಲೇವಾರಿ ಮಾಡಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಸವರಾಜ ವರವಟ್ಟಿ ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಮನೆ, ಕಚೇರಿ, ಸುತ್ತಲಿನ ಪರಿಸರ ಸ್ವಚ್ಛ ಮಾಡಿದರೆ, ನಮ್ಮ ದೇಶ ಸ್ವಚ್ಛಗೊಳ್ಳುತ್ತದೆ. ಪ್ಲಾಸ್ಟಿಕ್ ಬಳಕೆ ನಿಲ್ಲಿಸಬೇಕು.

ಪ್ಲಾಸ್ಟಿಕ್ ಮರುಬಳಕೆ ಮಾಡಿ ಪ್ಲಾಸ್ಟಿಕ್ ಮುಕ್ತ ಭಾರತ ಅಭಿಯಾನಕ್ಕೆ ಎಲ್ಲರೂ ಕೈ ಜೋಡಿಸಬೇಕಿದೆ. ಜತೆಗೆ ಜಾಗೃತಿ ಮೂಡಿಸುವ ಅಭಿಯಾನವನ್ನು ಎಲ್ಲರೂ ಪ್ರಮಾಣಿಕವಾಗಿ ಮಾಡಬೇಕು ಎಂದರು. ರಾಷ್ಟ್ರೀಯ ಸ್ವಯಂ ಸೇವಕರಾದ ಆದರ್ಶ, ಗಂಗಾಧರ, ಅಕ್ಷಯ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net