ಫೆ. 25ರ. ಡಾ. ಎಂ.ಜಿ.ವಿಗೆ ಅಭಿನಂದನಾ ಸಮಾರಂಭ

ಫೆ. 25ರ. ಡಾ. ಎಂ.ಜಿ.ವಿಗೆ ಅಭಿನಂದನಾ ಸಮಾರಂಭ
Published on

ಹಾಸನ: ನಗರದ ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಡಾ.ಎಂ.ಜಿ.ವೆಂಕಟೇಶ್‌ಮೂರ್ತಿ ಅವರಿಗೆ ಅಭಿನಂದನಾ ಸಮಾರಂಭವನ್ನು ಫೆ. 25ರ ಭಾನುವಾರ ಹಾಸನಾಂಬ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದೆ ಎಂದು ಕಾಲೇಜಿನ ನಿವೃತ್ತ ವಿಶ್ರಾಂತ ಪ್ರಾಂಶುಪಾಲ ಡಾ.ಕೆ.ಎಸ್.ಜಯಂತ್ ಅವರು ತಿಳಿಸಿದರು.
ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ಇಂಜಿನೀಯರಿಂಗ್ ಮತ್ತು ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿಭಾಗದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ವೆಂಕಟೇಶ್‌ಮೂರ್ತಿ ಅವರು ಜಿಲ್ಲೆಯ ಹೆಮ್ಮೆ ಎಂದರು. ಅಂದು ಬೆಳಿಗ್ಗೆ 10.30ಕ್ಕೆ ಸಮಾರಂಭ ಆರಂಭವಾಗಲಿದ್ದು, ಶ್ರೀಮತಿ ಕಲ್ಪನಾ ವೆಂಕಟೇಶ್‌ಮೂರ್ತಿ ಸಮಾರಂಭ ಉದ್ಘಾಟಿಸುವರು. ಮಲೆನಾಡು ತಾಂತ್ರಿಕ ಶಿಕ್ಷಣ ಸಮಿತಿ ಉಪಾಧ್ಯಕ್ಷ ಜಿ.ಎಲ್.ಮುದ್ದೇಗೌಡ ಅವರು ಪಾಲ್ಗೊಳ್ಳುವರು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಕರಿಸಿದ್ದಪ್ಪ ಅಭಿನದನಾ ಗ್ರಂಥ ಬಿಡುಗಡೆ ಮಾಡುವರು. ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಕೆ.ಚಿದಾನಂದಗೌಡ ಅವರು ಅಭಿನಂದನಾ ನುಡಿಗಳನ್ನು ಆಡಲಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಎಂದರು.
ಕಾರ್ಯಕ್ರಮದ ಅಂಗವಾಗಿ ವಿಚಾರ ಸಂಕಿರಣ ಆಯೋಜಿಸಿದ್ದು, ಅಂತರರಾಷ್ಟ್ರೀಯ ವಿಚಾರವಾದಿ ಎ.ಎಚ್.ಸಾಗರ್, ಡಾ.ಎಂ.ಕೆ.ರವಿಶಂಕರ್ ವಿಷಯ ಮಂಡಿಸಲಿದ್ದಾರೆ ಎಂದರು.
ಡಾ.ವೆಂಕಟೇಶ್‌ಮೂರ್ತಿ ಅತ್ಯಂತ ಸರಳ ವ್ಯಕ್ತಿತ್ವದ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಅವರ ಜ್ಞಾನ ಸಂಪತ್ತು ಅಮೋಘವಾದುದು. ವಿದ್ಯಾರ್ಥಿ ಹಾಗು ಸಹೋದ್ಯೋಗಿಗಳ ನಡುವೆ ಉತ್ತಮ ಬಾಂಧವ್ಯ ಹೊಂದಿದ್ದ ಅವರು ಮಾನವೀಯ ಮೌಲ್ಯಗಳ ಕಣಜವಾಗಿದ್ದಾರೆ ಎಂದು ಹೇಳಿದರು.
ಕಾಲೇಜಿನ ಪ್ರಾಧ್ಯಾಪಕರಾದ ಡಾ.ಎಂ.ಕೆ.ರವಿಶಂಕರ್, ಡಾ.ಮೈನಾ, ಡಾ.ಉಮಾ ಹಾಗು ಎಂ.ವಿ.ಶಿವರಾಮ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net