ಫೆ.7 ರಂದು ‘ಭಗೀರಥ’ ಬಿಡುಗಡೆ

Film
Published on

ಡೇರಿಂಗ್ ಸ್ಟಾರ್ ಎಸ್.ಜಯಪ್ರಕಾಶ್(ಜೆ.ಪಿ.) ನಟಿಸಿರುವ ‘ಭಗೀರಥ’ ಚಿತ್ರವು ಫೆ.7 ರಂದು ರಾಜ್ಯಾದ್ಯಂತ ತೆರೆಕಾಣಲಿದೆ.

ಇತ್ತೀಚೆಗೆ ‘ಭಗೀರಥ’ ಸಿನಿಮಾದ ಮುಹೂರ್ತ ಸಮಾರಂಭ ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನೆರವೇರಿದೆ. ಕೆ.ರಮೇಶ್ ಹಾಗೂ ಬಿ.ಭೈರಪ್ಪ ಮೈಸೂರು ಅವರು ಸಾಯಿ ರಮೇಶ್ ಪ್ರೊಡಕ್ಷನ್ ಲಾಂಛನದಲ್ಲಿ ಈ ಸಿನಿಮಾ ನಿರ್ಮಿಸುತ್ತಿದ್ದಾರೆ. ಈ ಚಿತ್ರಕ್ಕೆ ರಾಮ್ ಜನಾರ್ದನ್ ನಿರ್ದೇಶನ ಇದೆ ಎಂದು ನಟ ಜಯಪ್ರಕಾಶ್ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಚಂದನಾ ರಾಘವೇಂದ್ರ, ಸುಧಾ ಬೆಳವಾಡಿ, ಶಿವರಾಜ್ ಕೆ.ಆರ್.ಪೇಟೆ, ರವಿ ಕಾಳೆ, ಬಾಲ ರಾಜವಾಡಿ, ಸುರಭಿ ರವಿ, ನಯನಾ, ನಿಖಿತಾ ಮುಂತಾದವರು ಸಿನಿಮಾದಲ್ಲಿದ್ದಾರೆ. ಹಿರಿಯ ನಿರ್ದೇಶಕ ಸಾಯಿಪ್ರಕಾಶ್ ಅವರು ಮಠಾಧಿಪತಿಗಳ ಪಾತ್ರ ನಿರ್ವಹಿಸಿದ್ದಾರೆ ಎಂದರು.

7 ರಂದು ಬೆಳಗ್ಗೆ 10 ಗಂಟೆಗೆ ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ ಪ್ರಭಾ ಚಿತ್ರಮಂದಿರದವರೆಗೆ ಸ್ಟಾರ್ ಮೆರವಣಿಗೆ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net