

ನಗರದ ಉದಯಗಿರಿಯಲ್ಲಿ ಸೋಮವಾರ ರಾತ್ರಿ ನಡೆದ ಕಲ್ಲುತೂರಾಟ ಪ್ರಕರಣ ಸಂಬಂಧ ಪೊಲೀಸರು ಗುರುವಾರವೂ 8 ಜನರನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.
ಸಿಸಿ ಕ್ಯಾಮರಾ ದೃಶ್ಯಾವಳಿಯನ್ನು ಆಧರಿಸಿ ಉದಯಗಿರಿ, ಗೌಸಿಯಾನಗರ, ಶಾಂತಿನಗರ, ರಾಜೀವ್ ನಗರ ಬಡಾವಣೆ ನಿವಾಸಿಗಳನ್ನು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಉದಯಗಿರಿ ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡಿದ್ದಾರೆ.