ಬಜೆಟ್‌ನಲ್ಲಿ ಕೋಲಾರಕ್ಕೆ ಬಂಪರ್ ಕೊಡುಗೆ ಕಾಂಗ್ರೆಸ್ ಕಾರ್ಯಕರ್ತರಿಂದ ವಿಜಯೋತ್ಸವ / ಜನರ ಬಹುದಿನಗಳ ಬೇಡಿಕೆಯಾದ ಮೆಡಿಕಲ್ ಕಾಲೇಜ್ ಸ್ಥಾಪನೆಗೆ ಕೂಡಿಬಂತು ಭಾಗ್ಯ / ಲಕ್ಷಿö್ಮÃದೇವಮ್ಮ

Published on

ವಿಜಯವಾಣಿ ಸುದ್ದಿಜಾಲ ಕೋಲಾರ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್‌ನಲ್ಲಿ ಜಿಲ್ಲೆಗೆ ಮೆಡಿಕಲ್ ಕಾಲೇಜು ಕೆಜಿಎಫ್ ಹೈಟೆಕ್ ಮಾರುಕಟ್ಟೆ ಸೇರಿದಂತೆ ಬಂಪರ್ ಕೊಡುಗೆ ನೀಡಿದ್ದು, ಇದು ರಾಜ್ಯದ ಅಭಿವೃದ್ಧಿಗೆ ಪೂರಕವಾದ ಬಜೆಟ್ ಎಂದು ಕಾಂಗ್ರೆಸ್ ಕಾರ್ಯಕರ್ತರು ನಗರದ ಹೊಸ ಬಸ್ ನಿಲ್ದಾಣದಲ್ಲಿ ಶುಕ್ರವಾರ ವಿಜಯೋತ್ಸವ ಆಚರಿಸಿದರು.

ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ಮಾತನಾಡಿ, ಕೋಲಾರ ಜನರ ಬಹುದಿನಗಳ ಬೇಡಿಕೆಯಾದ ಮೆಡಿಕಲ್ ಕಾಲೇಜಿಗೆ ಬಜೆಟ್‌ನಲ್ಲಿ ಹಣ ಬಿಡುಗಡೆ ಮಾಡಿದ್ದಾರೆ. ಸುಮಾರು ೩೧೯೦ ಕೋಟಿ ವೆಚ್ಚದ ದೇವನಹಳ್ಳಿ-ವಿಜಯಪುರ, ಹೆಚ್.ಕ್ರಾಸ್, ವೇಮಗಲ್, ಮಾಲೂರು ಮೂಲಕ ತಮಿಳುನಾಡು ಗಡಿಗೆ ಸಂಪರ್ಕ ಕಲ್ಪಿಸುವ ೧೨೩ ಕಿ.ಮಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಸಕ್ತ ಸಾಲಿನಲ್ಲಿ ೩೦ ಕಿ.ಮೀ ರಸ್ತೆಯನ್ನು ಪೂರ್ಣಗೊಳಿಸಲು ಹಣ ಮಂಜೂರು ಮಾಡಲಾಗಿದೆ. ಕೆಜಿಎಫ್ ತಾಲ್ಲೂಕಿನಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ರೈತರ ಅತ್ಯಾಧುನಿಕ ಮಾರುಕಟ್ಟೆ ಸ್ಥಾಪನೆ ಅನುಮೋದನೆ ನೀಡಲಾಗಿದೆ. ಎಂದರು.

ನರಸಾಪುರದಲ್ಲಿ ಕಾರ್ಖಾನೆಗಳು ತಲೆ ಎತ್ತಿದ್ದು, ಉದ್ಯೋಗಸ್ಥ ಮಹಿಳೆಯರಿಗೆ ಸುರಕ್ಷಿತ ಹಾಗೂ ಉತ್ತಮ ವಾತಾವರಣ ಕಲ್ಪಿಸಲು ಜಿಲ್ಲೆಯ ನರಸಾಪುರದಲ್ಲಿ ೧೭೩ ಕೋಟಿ ರೂ.ಗಳ ವೆಚ್ಚದಲ್ಲಿ ೬೦೦೦ ಸಾಮರ್ಥ್ಯದ ಮಹಿಳಾ ವಸತಿ ಗೃಹಗಳನ್ನು ಸ್ಥಾಪನೆಗೆ ಬಜೆಟ್‌ನಲ್ಲಿ ಅವಕಾಶ ಕಲ್ಪಿಸಿಕೊಡಲಾಗಿದೆ. ಹಾಗೂ ಕೆ.ಜಿ.ಎಫ್.ಬಳಿ ೪೦ ಕೋಟಿ ರೂ.ಗಳ ಅನುದಾನದಲ್ಲಿ ಭಾರತೀಯ ಮೀಸಲು ಪೋಲಿಸ್ ಪಡೆಗಳನ್ನು ಸ್ಥಾಪಿಸಲು ಅವಕಾಶ ನೀಡಲಾಗಿದೆ. ಹಾಗೂ ಕೋಲಾರದಲ್ಲಿ ಹೊಸ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಸ್ಥಾಪಿಸಲು ಮುಖ್ಯಮಂತ್ರಿಗಳು ಅವಕಾಶ ನೀಡಿದ್ದಾರೆ ಎಂದರು.

ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಬಜೆಟ್ ಇದಾಗಿದೆ. ಕೃಷಿ, ನೀರಾವರಿ ಗ್ರಾಮೀಣ ಅಭಿವೃದ್ಧಿ ಮೂಲಸೌಕರ್ಯ, ಸಮಾಜ ಕಲ್ಯಾಣ, ಶಿಕ್ಷಣ, ಆರೋಗ್ಯ, ಉದ್ಯೋಗ ಸೃಷ್ಠಿ ರೈತರಿಗೆ ಸಹಕಾರಿ ಬಜೆಟ್, ಪಂಚ ಗ್ಯಾರಂಟಿಗಳ ಜೊತೆಗೆ ಆರ್ಥಿಕ ಸಮತೋಲನ ಕಾಳಜಿಯೊಂದಿಗೆ ಸರ್ವ ಸ್ಪರ್ಶಿ ಹಾಗೂ ಸಮಾನತೆಯನ್ನು ಸಾಧಿಸಿದ್ದಾರೆ. ಇದಕ್ಕೆ ಜಿಲ್ಲೆಯ ಉಸ್ತುವಾರಿ ಸಚಿವರು ಶಾಸಕರು ಕಾರಣವಾಗಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.

ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ವೈ ಶಿವಕುಮಾರ್, ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಫೈರೋಜ್ ಖಾನ್, ಸದಸ್ಯರಾದ ಅಂಬರೀಷ್, ಸೂರಿ, ಅಮರನಾಥ, ಬೆಂಗಳೂರು ಉತ್ತರ ಸಿಂಡಿಕೇಟ್ ಸದಸ್ಯರಾದ ಸೀಸಂದ್ರ ಗೋಪಾಲಗೌಡ, ಅರ್ಬಾಜ್ ಪಾಷ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಆಫ್ರಿದ್, ಮುಖಂಡರಾದ ಮೈಲಾಂಡಹಳ್ಳಿ ಮುರಳಿ, ಷಂಷೀರ್, ಮಹಮ್ಮದ್ ಖಯ್ಯಾಮ್, ಚಂದ್ರಮೌಳಿ, ಬೆಳಗಾನಹಳ್ಳಿ ಮುನಿವೆಂಕಟಪ್ಪ, ಕುರಿಗಳ ರಮೇಶ್, ಮುಂತಾದವರು ಇದ್ದರು.

ಚಿತ್ರ ೦೭ ಕೆ.ಎಲ್.ಆರ್. ೦೨ : ಕೋಲಾರ ಜಿಲ್ಲೆಗೆ ಉತ್ತಮ ಬಜೆಟ್ ನೀಡಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿ ಕಾಂಗ್ರೇಸ್ ಕಾರ್ಯಕರ್ತರು ಬಸ್ ನಿಲ್ದಾಣದಲ್ಲಿ ವಿಜಯೋತ್ಸವ ಆಚರಣೆ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net