ಬಡಗಲಪುರದಲ್ಲಿ ಕಣ್ಣಿನ ತಪಾಸಣೆ ಶಿಬಿರ

12 SARAG 1
Published on

ಸರಗೂರು: ತಾಲೂಕಿನ ಹಾದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡಗಲಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಕಣ್ಣಿನ ತಪಾಸಣೆ, ಶಸ್ತ್ರಚಿಕಿತ್ಸೆ ಹಾಗೂ ಸಕ್ಕರೆ ಕಾಯಿಲೆ ಉಚಿತ ಶಿಬಿರ ಆಯೋಜಿಸಲಾಗಿತ್ತು.
ಆಡಳಿತ ವೈದ್ಯಾಧಿಕಾರಿ ಡಾ.ಅಲೀಮ್ ಪಾಷಾ ಶಿಬಿರ ಉದ್ಘಾಟಿಸಿ ಮಾತನಾಡಿ, ಶಿಬಿರದಲ್ಲಿ ಆಯ್ಕೆ ಯಾದ ಅರ್ಹ ಫಲಾನುಭವಿಗಳಿಗೆ ಶಸ್ತ್ರಚಿಕಿತ್ಸೆ ನೆರವೇರಿಸಿ ದೃಷ್ಟಿದೋಷ ನಿವಾರಣೆ ಮಾಡಲಾಗುವುದು. ಅವರಿಗೆ ಪ್ರತಿವಾರ ನಮ್ಮ ಆರೋಗ್ಯ ಕೇಂದ್ರದಲ್ಲಿ ಪರೀಕ್ಷೆ ಮಾಡಿ ಗುಣವಾಗುವ ಔಷಧಗಳನ್ನು ನೀಡಲಾಗುವುದು ಎಂದು ಹೇಳಿದರು.
ಎಸ್‌ವಿವೈಎಂ ಸಂಸ್ಥೆ ಸರಗೂರು ತಂಡ ಮತ್ತು ಆಸ್ಪತ್ರೆ ಸಿಬ್ಬಂದಿ, ಆಶಾ ಕಾರ್ಯಕರ್ತರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net