ಬಡವರ ಕನಸಿನ ಸೂರು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ: ಕೆ.ಎಂ.ಶಿವಲಿಂಗೇಗೌಡ

ಬಡವರ ಕನಸಿನ ಸೂರು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ: ಕೆ.ಎಂ.ಶಿವಲಿಂಗೇಗೌಡ
Published on

ಅರಸೀಕೆರೆ: ಬಡವರ ಕನಸಿನ ಸೂರು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ನಡೆಸಿದ್ದೇನೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು.

ಸರಸ್ವತಿ ಪುರಂ ಹಾಗೂ ಇಂದಿರಾ ನಗರ ಬಡಾವಣೆಯ ನಿವಾಸಿಗಳಿಗೆ ಶುಕ್ರವಾರ ಹಕ್ಕುಪತ್ರ ವಿತರಿಸಿ ಮಾತನಾಡಿದರು.

ನಗರದಲ್ಲಿ ಸ್ವಂತ ಮನೆ ನಿರ್ಮಿಸಿಕೊಳ್ಳಲು ಬಯಸಿದ್ದ ಅರ್ಹ ಫಲಾನುಭವಿಗಳ ಕನಸು ನನಸಾಗುವ ಸಮಯ ಬಂದಿರುವುದು ಸಂತಸದ ಸಂಗತಿಯಾಗಿದೆ.ಸರ್ಕಾರದ ಯೋಜನೆಗಳನ್ನು ತಲುಪಿಸಲು ನನ್ನ ಅವಧಿಯಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಿದ್ದೇನೆ ಎಂದರು.

ನಗರಸಭೆ ಅಧ್ಯಕ್ಷ ಸಿ.ಗಿರೀಶ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಹತ್ವದ ಕೊಡುಗೆಯನ್ನು ಕೊಳಗೇರಿ ನಿವಾಸಿಗಳಿಗೆ ನೀಡಿದೆ.ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸರಾಜ ಬೊಮ್ಮಯಿ ಹಾಗೂ ವಸತಿ ಸಚಿವ ವಿ.ಸೋಮಣ್ಣ ಕೊಡುಗೆಯನ್ನು ಮರೆಯುವಂತಿಲ್ಲ ಎಂದು ಶ್ಲಾಘಿಸಿದ ಅವರು, ಹಕ್ಕುಪತ್ರ ವಿತರಣೆ ಶೀಘ್ರಗತಿಯಲ್ಲಿ ಅನುಷ್ಠಾನಗೊಳ್ಳಲು ಬಿಜೆಪಿ ಮುಖಂಡ ಎನ್.ಆರ್.ಸಂತೋಷ್ ಪರಿಶ್ರಮ ಅಪಾರ ಎಂದರು.

ಉಪಾಧ್ಯಕ್ಷ ಕಾಂತೇಶ್,ಪೌರಾಯುಕ್ತ ಕೃಷ್ಣಮೂರ್ತಿ, ಡಿವೈಎಸ್‌ಪಿ ಅಶೋಕ್, ಮುಖಂಡ ಹರ್ಷವರ್ಧನ್ ರಾಜ್,ದರ್ಶನ್ ದಾಸ ಹಾಗೂ ಕೊಳಚೆ ನಿರ್ಮೂಲನಾ ಮಂಡಳಿ ಅಧಿಕಾರಿಗಳು ಹಾಜರಿದ್ದರು.

ಎರಡೂ ಬಡಾವಣೆಯಲ್ಲಿ 150ಕ್ಕೂ ಹೆಚ್ಚಿನ ಫಲಾನುಭವಿಗಳು ಹಕ್ಕುಪತ್ರ ಪಡೆದುಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net