ಬದುಕು ಕಟ್ಟಿಕೊಟ್ಟಿರುವ ಹೈನುಗಾರಿಕೆ

IMG-20230601-WA0193
Published on

ಪಾಂಡವಪುರ: ಹೈನುಗಾರಿಕೆ ಲಕ್ಷಾಂತರ ಕುಟುಂಬಗಳಿಗೆ ಬದುಕು ಕಟ್ಟಿಕೊಟ್ಟಿದ್ದು, ಜೀವನೋಪಾಯಕ್ಕೆ ದಾರಿ ಮಾಡಿಕೊಟ್ಟಿದೆ ಎಂದು ಮನ್‌ಮುಲ್ ನಿರ್ದೇಶಕ ಕಾಡೇನಹಳ್ಳಿ ರಾಮಚಂದ್ರು ಹೇಳಿದರು.

ವಿಶ್ವ ಹಾಲು ದಿನಾಚರಣೆ ಪ್ರಯುಕ್ತ ಪಟ್ಟಣದ ಉಪವಿಭಾಗೀಯ ಆಸ್ಪತ್ರೆ ಒಳ ಮತ್ತು ಒಳ ರೋಗಿಗಳಿಗೆ ಗುರುವಾರ ಹಣ್ಣು, ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ವಿತರಿಸಿ ಮಾತನಾಡಿದರು.

ನಾವು ದೊಡ್ಡವರಾಗುವ ತನಕ ಹಾಲಿನ ಪ್ರಾಮುಖ್ಯತೆ ಬಗ್ಗೆ ನಮ್ಮ ಹಿರಿಯರು ಹೇಳುತ್ತಲೇ ಬಂದಿದ್ದಾರೆ. ಆರೋಗ್ಯಕರ ಜೀವನ, ಆಹಾರ ಪದ್ಧತಿಯಲ್ಲಿ ಹಾಲು ಬಹಳ ಪ್ರಾಮುಖ್ಯತೆ ಪಡೆದಿದೆ. ಆರೋಗ್ಯಕರ ಜೀವನಕ್ಕೆ ಪೌಷ್ಟಿಕಾಂಶವುಳ್ಳ ಹಾಲಿನ ಸೇವನೆ ಬಹುಮುಖ್ಯವಾಗಿದೆ. ಪ್ರತಿಯೊಬ್ಬ ಮನುಷ್ಯ ಆರೋಗ್ಯಕರ ಜೀವನಕ್ಕೆ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಬಳಸಬೇಕು. ಇಡೀ ರಾಜ್ಯದಲ್ಲಿ ಹಾಲು ಸಂಗ್ರಹಣೆ ಹಾಗೂ ಹಾಲಿನ ಉತ್ಪನ್ನಗಳ ಉತ್ಪಾದನೆ ಹಾಗೂ ಬಳಕೆಯಲ್ಲಿ ಮಂಡ್ಯ ಜಿಲ್ಲೆ ಉನ್ನತ ಸ್ಥಾನದಲ್ಲಿದೆ ಎಂದು ತಿಳಿಸಿದರು.

ಮನ್‌ಮುಲ್ ಉಪವ್ಯವಸ್ಥಾಪಕ ಆರ್. ಪ್ರಸಾದ್, ಮಾರ್ಗ ವಿಸ್ತರಣಾಧಿಕಾರಿ ಜಗದೀಶ್, ದಿವ್ಯಾ, ಸಂಧ್ಯಾ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net