ಗುಂಡ್ಲುಪೇಟೆ: ದಲಿತ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ನಡೆಯನ್ನು ಪುರಸಭೆ ಸದಸ್ಯ ರಾಜಗೋಪಾಲ್ ಖಂಡಿಸಿದ್ದಾರೆ. ನಾಡಹಬ್ಬ ದಸರಾ ಉದ್ಘಾಟನೆ ಬಗ್ಗೆ ಮಾತನಾಡಿ, ಸನಾತನ ಧರ್ಮದವರು ಮಾತ್ರ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಬೇಕು, ದಲಿತ ಮಹಿಳೆಯರೂ ಮಾಡಬಾರದು ಎಂದು ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಾರೆ. ಪ್ರಸ್ತುತ ಮಹಿಳೆಯರು ಎಲ್ಲ್ಲ ಕ್ಷೇತ್ರಗಳಲ್ಲಿಯೂ ಉತ್ತಮ ಸಾಧನೆ ಮಾಡಿದ್ದಾರೆ. ಆದರೆ ಯತ್ನಾಳ್ ಹೇಳಿಕೆ ಖಂಡನೀಯ. ಯತ್ನಾಳ್ ಕೂಡಲೇ ತಮ್ಮ ಹೇಳಿಕೆ ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡಬೇಕಾಗುತ್ತದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.