ಬಹುಸಂಸ್ಕೃತಿ ಉತ್ಸವಕ್ಕೆ ಮುಖ್ಯಮಂತ್ರಿಗೆ ಆಹ್ವಾನ

Published on


ಮಂಗಳೂರು : ಸುವರ್ಣ ಕರ್ನಾಟಕ ಸಂಭ್ರಮ-50 ಇದರ ಅಂಗವಾಗಿ ಅ.24 ಹಾಗೂ 25ರಂದು ಮಂಗಳೂರಿನಲ್ಲಿ ನಡೆಯಲಿರುವ ಬಹುಸಂಸ್ಕೃತಿ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಆಹ್ವಾನ ನೀಡಲಾಯಿತು.
ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್, ಕೊಂಕಣಿ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಆಳ್ವಾರಿಸ್, ಬ್ಯಾರಿ ಅಕಾಡೆಮಿ ಅಧ್ಯಕ್ಷ ಉಮರ್.ಯು.ಎಚ್., ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಕೊಡವ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ , ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ಶಿವರಾಮ ಶೆಟ್ಟಿ ತಲ್ಲೂರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net