ಬಾಣಂತಿಯರ ಸಾವು ಘಟನೆ ಖಂಡನೇ, ನಾಳೆ ಬಿಜೆಪಿಯಿಂದ ಸುವರ್ಣಸೌಧಕ್ಕೆ ಮುತ್ತಿಗೆ

Suvarna vidhanaSoudha
Published on

ಬೆಳಗಾವಿ: ಬಳ್ಳಾರಿ ಸೇರಿ ರಾಜ್ಯದಲ್ಲಿ ನಡೆಯುತ್ತಿರುವ ಬಾಣಂತಿಯರ ಸಾವು ಘಟನೆ ಖಂಡಸಿ ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧ ರಾಜ್ಯ ಬಿಜೆಪಿ ಮಹಿಳಾ ಘಟಕದ ವತಿಯಿಂದ ಡಿ.16 ರಂದು ಪ್ರತಿಭಟನೆ ನಡೆಸಿ, ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಭಾರತೀಯ ಜನತಾ ಪಕ್ಷದ ರಾಜ್ಯ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಶೋಭಾ ನಿಸ್ಸಿಮಗೌಡ್ರ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮಹಿಳೆಯರಿಗೆ ರಕ್ಷಣೆ ಇಲ್ಲದಾಗಿದೆ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿಗೆ ರಾಜ್ಯ ಸರ್ಕಾರದ ನಿರ್ಲಕ್ಷ್ಯವೆ ಕಾರಣ ಎಂದು ದೂರಿದರು.

ಮಹಿಳೆಯರಿಗೆ ಗೃಹ ಲಕ್ಷ್ಮಿ, ಶಕ್ತಿ ಯೋಜನೆ ನೀಡಿದ್ದು ಸ್ವಾಗತಾರ್ಹ.ಆದರೆ ಯೋಜನೆಗೆ ಪೂರಕವಾದ ವ್ಯವಸ್ಥೆ ಮಾಡಬೇಕು, ಸಾರಿಗೆ ಇಲಾಖೆಯ ಬಸ್‌ನಲ್ಲಿ ಸಿಟಿಗಾಗಿ ಹಲವು ಕಡೆ ಗದ್ದಲಗಳಾಗುತ್ತಿವೆ,ಅವಘಡಗಳು ಸಂಭವಿಸುತ್ತಿವೆ.ಕೂಡಲೇ ಸಾರಿಗೆ ಇಲಾಖೆ ಬಸ್‌ಗಳ ಸಂಖ್ಯೆ ಹೆಚ್ಚಿಸಿ, ಮಹಿಳೆಯರಿಗಾಗುತ್ತಿರುವ ತೋಂದರೆಗಳನ್ನು ತಪ್ಪಿಸಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಾಗಿದೆ. ವಿಶೇಷವಾಗಿ ಬಾಣಂತಿ ಮಹಿಳೆಯ ಸಾವಿನ ಬಗ್ಗೆ ಸರ್ಕಾರದ ನಡೆ ಖಂಡಿಸಿ ಸೋಮವಾರ ನಗರದ ಯಡಿಯೂರಪ್ಪ ಮಾರ್ಗದಲ್ಲಿರುವ ಮಾಲಿನ ಸಿಟಿಯಿಂದ ಬಿಜೆಪಿ ರಾಜ್ಯದ್ಯಕ್ಷ ಬಿ.ವಾಯ್ ವಿಜಯೇಂದ್ರ ನೇತೃತ್ವದಲ್ಲಿ ಸಾವಿರಾರೂ ಸಂಖ್ಯೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ನಡೆಯನ್ನು ಖಂಡಿಸಿ,ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದರು.

ಸೋನಾಲಿ ಸರ್ನೋಬತ,ನಯನಾ ಬಸ್ಮೆ,ಶಿಲ್ಪಾ ಕೇಕರೆ,ಶಾಂಬವಿ ಅಶ್ವತಪುರ,ಉಜ್ವಲಾ ಬಡವನಾಚೆ,ಸುಭಾಷ ಪಾಟೀಲ,ಸಚಿನ ಕಡಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net