ಬಾವಲಿ ಚೆಕ್ ಪೋಸ್ಟ್‌ನಲ್ಲಿ ಅಧಿಕಾರಿಗಳಿಂದ ಪರಿಶೀಲನೆ

22HDK02
22ಊಆಏ01, 22ಊಆಏ02, 22ಊಆಏ03 ಎಚ್.ಡಿ.ಕೋಟೆ ಕೇರಳದಲ್ಲಿ ಆಫ್ರಿಕನ್ ಸ್ವೈನ್ ಫೀವರ್‌ಹಿನ್ನೆಲೆಯಲ್ಲಿ ತಾಲೂಕಿನ ಭಾವಲಿ ಚೆಕ್‌ಪೋಸ್ಟ್‌ಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಸಣ್ಣರಾಮಪ್ಪ, ಡಾ.ಟಿ.ರವಿಕುಮಾರ್, ಡಾ.ಪ್ರಸನ್ನ ಇತರರು ಇದ್ದರು.
Published on

ಎಚ್.ಡಿ.ಕೋಟೆ: ಕೇರಳದಲ್ಲಿ ಆಫ್ರಿಕನ್ ಸ್ವೈನ್ ಫೀವರ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳವಾರ ತಾಲೂಕು ಆಡಳಿತದ ವತಿಯಿಂದ ಬಾವಲಿ ಚೆಕ್ ಪೋಸ್ಟ್‌ನಲ್ಲಿ ಪರಿಶೀಲನೆ ನಡೆಸಲಾಯಿತು.

ತಹಸೀಲ್ದಾರ್ ಸಣ್ಣರಾಮಪ್ಪ ನೇತೃತ್ವದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಪ್ರಸನ್ನ ಅವರ ತಂಡ ಕೇರಳ ಮತ್ತು ಕರ್ನಾಟಕ ಗಡಿಭಾಗವಾದ ಬಾವಲಿ ಚೆಕ್ ಪೋಸ್ಟ್‌ಗೆ ಭೇಟಿ ನೀಡಿ, ಮೇಲ್ವಿಚಾರಣೆ ನಡೆಸಿತು.

ಡಾ.ಪ್ರಸನ್ನ ಮಾತನಾಡಿ, ಹಂದಿಗಳಲ್ಲಿ ಕಂಡುಬರುವ ಆಫ್ರಿಕನ್ ಸ್ವೈನ್ ಫೀವರ್ ಆಗಸ್ಟ್ ಮೊದಲ ವಾರ ಕೇರಳದಲ್ಲಿ ಪತ್ತೆಯಾಗಿದೆ. ಈ ಕಾಯಿಲೆ ಜಾನುವಾರು, ಪ್ರಾಣಿಗಳಿಗೆ ಹರಡಲಿದೆ. ಜ್ವರ, ಮುಖ ಮತ್ತು ದೇಹದಲ್ಲಿ ಕೆಪ್ಪು ಬಣ್ಣದ ಗುಳ್ಳೆಗಳು, ಬಾಯಿಯಲ್ಲಿ ಜೊಲ್ಲು ಸುರಿಯುವುದು, ವಾಂತಿ-ಬೇಧಿ ಆಗುವುದು ಇದರ ಮುಖ್ಯ ಲಕ್ಷಣ. ಈ ರೋಗವು ಪ್ರಾಣಿಗಳಿಂದ ಪ್ರಾಣಿಗಳಿಗೆ ಹರಡುತ್ತದೆ. ಮನುಷ್ಯರಿಗೆ ಹರಡುವುದಿಲ್ಲ ಎಂದರು. ಆಫ್ರಿಕನ್ ಸ್ವೈನ್ ಫೀವರ್ ಮಾರಣಾಂತಿಕ ಕಾಯಿಲೆಯಾಗಿದ್ದು, ಇದಕ್ಕೆ ಚಿಕಿತ್ಸೆ ಇಲ್ಲ ಎಂದರು.

ಈಗಾಗಲೇ ಕೇರಳದಲ್ಲಿ ಜಾನುವಾರುಗಳಿಗೆ ಕಾಲುಬಾಯಿ ಜ್ವರ ಕಾಣಿಸಿಕೂಡಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಡಿ.ಬಿ. ಕುಪ್ಪೆ ಮತ್ತು ಬಾವಲಿ ಸುತ್ತ ಮುತ್ತಲಿನ ಗ್ರಾಮದಲ್ಲಿ ಜಾನುವಾರುಗಳಿಗೆ ಲಸಿಕೆ ಹಾಕುತ್ತಿದ್ದೇವೆ ಎಂದು ಇದೇ ವೇಳೆ ಮಾಹಿತಿ ನೀಡಿದರು.

ತಹಸೀಲ್ದಾರ್ ಸಣ್ಣರಾಮಪ್ಪ ಮಾತನಾಡಿ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಜಾನುವಾರು, ಪ್ರಾಣಿಗಳ ತಪಾಸಣೆ, ಚಿಕಿತ್ಸೆ ನೀಡುವ ದೃಷ್ಟಿಯಿಂದ 2 ತಂಡವನ್ನು ರಚನೆ ಮಾಡಲಾಗಿದೆ. ಒಂದು ತಂಡ ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆ ವರೆಗೆ. ಇನ್ನೊಂದು ತಂಡ ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆ ತನಕ ಕರ್ತವ್ಯ ನಿರ್ವಹಿಸಲಿದೆ. ಕೇರಳದಿಂದ ಪ್ರಾಣಿಗಳ ಸಾಗಣೆ, ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ, ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

ತಾಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್ ಮಾತನಾಡಿ, ಜನರಿಗೆ ಯಾವುದೇ ತರಹದ ಜ್ವರ ಕಾಣಿಸಿಕೊಂಡರೂ ತಕ್ಷಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋಗಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಇದೆ ಸಂದರ್ಭದಲ್ಲಿ ಬಾವಲಿ, ಡಿ.ಬಿ.ಕುಪ್ಪೆ ಸೇರಿದಂತೆ ಇತರೆಡೆ ಹಂದಿ ಮಾಂಸ ಮಾರಾಟ ಮಾಡುವ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಅರಣ್ಯ ಅಧಿಕಾರಿ ರಾಘವೇಂದ್ರ, ಆರೋಗ್ಯ ಇಲಾಖೆ ಸಿಬ್ಬಂದಿ ರವಿರಾಜ್, ವನಸಿರಿ ಉಮೇಶ್, ರವಿ, ಪೊಲೀಸ್ ಇಲಾಖೆ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net