ಬಿ.ವಿ.ಎ ಪದವಿಗೆ ಅರ್ಜಿ ಆಹ್ವಾನ

application
Published on

ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊoಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ದರ್ಥಾನವರ, ಮೈಸೂರು ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ) (ನಾಲ್ಕು ವರ್ಷದ ಎಂಟು ಸೆಮಿಸ್ಟರ್ ಎನ್.ಇ.ಪಿ ಪದ್ಧತಿ) ದೃಶ್ಯ ಕಲೆಯಲ್ಲಿ 2025-26 ನೇ ಶೈಕ್ಷಣಿಕ ಶಾಲೆಗೆ ಪ್ರಥಮ ಬಿ ಬಿ ಎ ಪದವಿ ಪ್ರವೇಶಾತಿಗೆ ಆನ್ಲೈನ್ (UUCMS) ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸದರಿ ಪದವಿಯಲ್ಲಿ 3 ನೇ ಸೆಮಿಸ್ಟರ್ ನಿಂದ ಚಿತ್ರಕಲೆ, ಶಿಲ್ಪ ಕಲೆ, ಗ್ರಾಫಿಕ್ಸ್ ಕಲೆ (ಅಚ್ಚು ಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.

ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಅಂತರ್ಜಾಲ ವಿಳಾಸ htts;//uucms.karanataka.gov.in ಅಥವಾ https;//www.cavamysore.karntaka.gov.in  ಅಂತರ್ಜಾಲದ ಮೂಲಕವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಹತಾ ಪರೀಕ್ಷೆಯ ದಿನಾಂಕ ಮತ್ತು ಇತರೆ ಮಾಹಿತಿಯನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಈ ಕಾರ್ಯಾಲಯದ ಸಹಾಯವಾಣಿಗೆ ಕಚೇರಿ ಸಮಯದಲ್ಲಿ 0821-2438931 ಅನ್ನು ಚಾಮರಾಜೇಂದ್ರ ದೃಶ್ಯ ಕಲಾ ಕಾಲೇಜಿನ ಡೀನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net