ಬಿಎಸ್‌ವೈ ವಿರುದ್ಧದ ಪೋಕ್ಸೊ ಪ್ರಕರಣ: ಎಸ್‌ಪಿಪಿಯಾಗಿ ಪ್ರೊ.ರವಿವರ್ಮ ಕುಮಾರ್ ನೇಮಕ

highcourt
Published on

ಬೆಂಗಳೂರು: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೆ.19ಕ್ಕೆ ಮುಂದೂಡಿದೆ.

ಪ್ರಕರಣ ಸಂಬಂಧ ಬಿಎಸ್‌ವೈ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಪ್ರಕರಣದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ರವಿವರ್ಮ ಕುಮಾರ್ ಅವರನ್ನು ನೇಮಕಗೊಳಿಸಿ ಸೆ.3ರಂದು ಆದೇಶ ಹೊರಡಸಿದೆ.

ಹೀಗಾಗಿ ಪ್ರಕರಣದ ಮಾಹಿತಿಯನ್ನು ಅವರಿಗೆ ನೀಡಲಾಗುವುದು. ಹೀಗಾಗಿ ವಾದ ಮಂಡಿಸಲು ಕಾಲಾವಕಾಶ ಬೇಕು ಎಂದು ಸಿಐಡಿ ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ್ ನಾಯ್ಕ ಅವರು ಮನವಿ ಮಾಡಿದರು.

ಇದನ್ನು ಪರಿಗಣಿಸಿದ ನ್ಯಾಯಾಲಯವು ಯಡಿಯೂರಪ್ಪ ಅವರನ್ನು ಬಂಧಿಸದಂತೆ ಮತ್ತು ಅವರಿಗೆ ವಿಚಾರಣೆಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿ ಈ ಹಿಂದೆ ನೀಡಿದ್ದ ಮಧ್ಯಂತರ ಆದೇಶ ಮುಂದುವರಿಯಲಿದೆ ಎಂದು ಆದೇಶಿಸಿದ ನ್ಯಾಯಾಲಯವು ವಿಚಾರಣೆಯನ್ನು ಸೆ. 19ಕ್ಕೆ ಮುಂದೂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net