

ಬೆಂಗಳೂರು: ಕರೊನಾ ಹರಡುವಿಕೆ ಸಂಬಂಧ ವದಂತಿ ಹಬ್ಬಿಸುವುದರ ಜತೆಗೆ ಅಲ್ಪಸಂಖ್ಯಾತರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡುವ ಮೂಲಕ ಕೋಮು ಸಾಮರಸ್ಯ ಹಾಳುಗೆಡವಲು ಬಿಜೆಪಿಯ ಕೆಲ ನಾಯಕರು ಪ್ರಯತ್ನಿಸುತ್ತಿದ್ದು, ಅವರನ್ನು ಬಂಧಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ಕೇಂದ್ರದ ಮಾಜಿ ಸಚಿವ ಅನಂತಕುಮಾರ ಹೆಗಡೆ, ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್, ಎಂ.ಪಿ. ರೇಣುಕಾಚಾರ್ಯ, ಶೋಭಾ ಕರಂದ್ಲಾಜೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಹಾಗೂ ಅವರನ್ನು ತಕ್ಷಣ ಬಂಧಿಸಬೇಕು ಎಂದು ಪೊಲೀಸ್ ಮಹಾ ನಿರ್ದೇಶಕರನ್ನು ಶುಕ್ರವಾರ ಭೇಟಿ ಮಾಡಿದ್ದ ಕಾಂಗ್ರೆಸ್ ನಿಯೋಗ ಮನವಿ ಸಲ್ಲಿಸಿತು.