ಬಿಜೆಪಿ ಯುವ ಮೋರ್ಚಾ ಜಿಲ್ಲಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ - ಬಂದ್‌ಗೆ ಬೆಂಬಲಿಸಿ ವಿವೇಕಾನಂದ ಹಾಗೂ ಅಂಬಿಕಾ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಣೆ

ggg
ಬಿಜೆಪಿ ಯುವ ಮೋರ್ಚಾ ಜಿಲ್ಲಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ
Published on

ಪುತ್ತೂರು: ಬಿಜೆಪಿ ಯುವ ಮೋರ್ಚಾ ಜಿಲ್ಲಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆಯಿಂದ ಆಕ್ರೋಶಿತರಾದ ಹಿಂದೂ ಸಂಘಟನೆಯ ಕಾರ್ಯಕರ್ತರು ಹಾಗೂ ಕುಟುಂಬಸ್ಥರು ಬೆಳಗ್ಗೆ 11 ಗಂಟೆಗೆ ಪುತ್ತೂರು ನಗರದಿಂದ ಮೆರವಣಿಗೆಯಲ್ಲಿ ಹೊರಟು ದರ್ಬೆ, ಸವಣೂರು ಕಾಣಿಯೂರು, ನಿಂತಿಕಲ್ಲು ಮೂಲಕ ಬೆಳ್ಳಾರೆಗೆ ಪ್ರವೀಣ್ ಅವರ ಮೃತದೇಹವನ್ನು ಕೊಂಡೊಯ್ಯಲು ಹಿಂದೂ ಸಂಘಟನೆಗಳು ಹಾಗೂ ಬಂಧು ಬಳಗದವರು ನಿರ್ಧರಿಸಿದ್ದಾರೆ.
ಇಂದು ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಿ, ವಾಹನ ಸಂಚಾರ ನಿಲ್ಲಿಸಿ ಬಂದ್ ನಡೆಸಬೇಕೆಂದು ಹಿಂದೂ ಪರ ಸಂಘಟನೆಗಳು ಕರೆ ನೀಡಿದ್ದಾರೆ. ಬಂದ್‌ಗೆ ಬೆಂಬಲಿಸಿ ವಿವೇಕಾನಂದ ಹಾಗೂ ಅಂಬಿಕಾ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಣೆ ಮಾಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net