ಬಿಜೆಪಿ ಶಾಸಕರ ವಿರುದ್ಧ ಕ್ರಮಕ್ಕೆ ಮನವಿ

21-sgn-2 banjara
Published on

ಶಿಗ್ಗಾಂವಿ: ವಿಧಾನಸಭೆ ಕಲಾಪದಲ್ಲಿ ಪ್ರತಿಪಕ್ಷ ಬಿಜೆಪಿ ಶಾಸಕರು ಸದನದಲ್ಲಿ ಬಿಲ್ ಪ್ರತಿಯನ್ನು ಹರಿದು ಅದನ್ನು ಉಪಸಭಾಧ್ಯಕ್ಷರ ಮುಖಕ್ಕೆ ಎಸೆದು ಸದನದ ಶಿಷ್ಟಾಚಾರ ಉಲ್ಲಂಘಿಸಿದ್ದಾರೆ. ಅಲ್ಲದೆ, ರಾಜ್ಯ ವಿಧಾನಸಭೆಗೆ ಅಗೌರವ ತೋರಿದ್ದಾರೆ ಎಂದು ಆರೋಪಿಸಿ ತಾಲೂಕು ಬಂಜಾರ ಸಮಾಜದ ಪದಾಧಿಕಾರಿಗಳು ಪಟ್ಟಣದ ತಹಸೀಲ್ದಾರ್ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.
ರಾಜ್ಯ ಬಂಜಾರ ಯುವಕರ ಮತ್ತು ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಿರೀಶ ಡಿ. ಆರ್. ಮಾತನಾಡಿ, ಪ್ರಜಾಪ್ರಭುತ್ವದ ದೇಗುಲವಾದ ವಿಧಾನಸಭೆಯಲ್ಲಿ ಬಿಜೆಪಿ ಶಾಸಕರು ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರ ಮೇಲೆ ಬಿಲ್‌ನ ಪ್ರತಿಗಳನ್ನು ಹರಿದು ಎಸೆಯುವ ಮೂಲಕ ಸದನದ ನಿಯಮ ಉಲ್ಲಂಘನೆ ಮಾಡಿರುವುದು ಖಂಡನೀಯ ಎಂದರು.
ಬಿಜೆಪಿ ಸದಸ್ಯರ ವರ್ತನೆ ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ದಲಿತ ಸಮುದಾಯಗಳಿಗೆ ಮಾಡಿದ ಅಪಮಾನ. ಇದಕ್ಕೆ ಕಾರಣಿಕರ್ತರಾದ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಬಳಿಕ ತಹಸೀಲ್ದಾರ್ ಸಂತೋಷ ಹಿರೇಮಠ ಅವರ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಸುಧೀರ ಅಂಗಡಿ, ಸುಧೀರ ಲಮಾಣಿ, ಆನಂದ ಲಮಾಣಿ, ಭೀಮಣ್ಣ ಕೊಟ್ಟೂರ, ಮುದಕಣ್ಣ ಹೊಸಪೇಟೆ, ಮುಸ್ತಾಕ್ ಮುಲ್ಲಾ, ಮಹಾಂತೇಶ ಬಿದರಕಟ್ಟಿ, ಶೇಖಪ್ಪ ಲಮಾಣಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net