ಬಿಜೆಪಿ ಸಂಸ್ಕೃತಿ ಎತ್ತಿ ತೋರಿಸುತ್ತಿದೆ

bkt-23-2
ಬಾಗಲಕೋಟೆ ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ ಮಾತನಾಡಿದರು. ಸಚಿವ ಆರ್.ಬಿ.ತಿಮ್ಮಾಪುರ, ಶಾಸಕ ಜೆ.ಟಿ.ಪಾಟೀಲ, ಶಾಸಕ ಎಚ್.ವೈ.ಮೇಟಿ ಇತರರು ಇದ್ದರು.
Published on

ಬಾಗಲಕೋಟೆ: ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಕಾಂಗ್ರೆಸ್ ನಾಯಕರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಇದು ಬಿಜೆಪಿ ಸಂಸ್ಕೃತಿಯನ್ನು ಎತ್ತಿ ತೋರಿಸುತ್ತಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ ಹೇಳಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯತ್ನಾಳ ಅವರು ಪದೇ ಪದೇ ತಮ್ಮ ನಾಯಕರ ವಿರುದ್ಧ ಹೇಳಿಕೆಗಳನ್ನು ನೀಡತ್ತಾ ಬಂದಿದ್ದು, ಈಗ ಕಾಂಗ್ರೆಸ್ ಪಕ್ಷದ ನಾಯಕರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಒಬ್ಬ ಜನಪ್ರತಿ ನಿಽಯಾಗಿ ಯಾವ ರೀತಿ ಮಾತನಾಡಬೇಕು ಎಂಬುದು ಮೊದಲು ತಿಳಿದುಕೊಳ್ಳಬೇಕು. ಇಂತಹ ಸಂಸ್ಕೃತಿಯನ್ನು ಯತ್ನಾಳ ಮೈಗೂಡಿ ಸಿಕೊಂಡಿದ್ದಾರೆ. ಹೇಳಿಕೆಗಳನ್ನು ನೀಡುತ್ತಾ ಶಿಳ್ಳೆ, ಚಪ್ಪಾಳೆ ತಟ್ಟಿಸಿ ಕೊಳ್ಳುವುದೇ ಇದೊಂದು ದೊಡ್ಡ ಸಾಧನೆ ಎಂದೆ ತಿಳಿದುಕೊಂಡಿದ್ದಾರೆ ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುವುದು ಕೂಡಲೇ ನಿಲ್ಲಿಸಬೇಕು ಎಂದು ಎಚ್ಚರಿಸಿದರು.

ರಾಹುಲ್ ಗಾಂಽ ವಿರುದ್ಧ ಪ್ರಚೋಧನಕಾರಿಯಾಗಿ ಹೇಳಿಕೆ ನೀಡುತ್ತಿರುವ ಬಿಜೆಪಿ ಪಕ್ಷದ ವಿರುದ್ಧ ಹಾಗೂ ಶಾಸಕ ಯತ್ನಾಳ ಹೇಳಿಕೆಯನ್ನು ಖಂಡಿಸಿ ನಾಳೆ ಸೆ.೨೪ ರಂದು ಬೆಳಗ್ಗೆ ೧೧ ಗಂಟೆಗೆ ನಗರದ ಬಸವೇಶ್ವರ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಆಯೋಜಿಸಿದ್ದೇವೆ ಎಂದರು.

ಸಚಿವ ಆರ್.ಬಿ.ತಿಮ್ಮಾಪುರ ಮಾತನಾಡಿ, ಬಿಜೆಪಿಯವರ ಹೀನ ಸಂಸ್ಕೃತಿಯವರಿದ್ದು ತ್ಯಾಗ ಬಲಿದಾನ ಮಾಡಿದಂತಹ ಗಾಂಽ ಕುಟುಂಬಕ್ಕೆ ಅವಮಾನ ಮಾಡುವಂತಹ ಹೇಳಿಕೆಗಳನ್ನು ನೀಡುತ್ತಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ತಿಳಿಸಿದರು.

ಶಾಸಕ ಜೆ.ಟಿ.ಪಾಟೀಲ ಮಾತನಾಡಿ, ಯತ್ನಾಳ ಅವರು ನನಗೆ ಆತ್ಮೀಯರು ಆಗಿದ್ದು, ನಮ್ಮ ಪಕ್ಷದ ನಾಯಕರ ವಿರುದ್ದ ಅಸಂಬದ್ಧ ಮಾತುಗಳನ್ನಾಡುತ್ತಿದ್ದು ಸರಿಯಲ್ಲ. ಮಾತುಗಳನ್ನು ನಿಲ್ಲಿಸಬೇಕು ಎಂದು ಕಿವಿಮಾತು ಹೇಳಿದರು.
ಶಾಸಕ ಎಚ್.ವೈ.ಮೇಟಿ ಸುದ್ದಿಗೋಷ್ಠಿಯಲ್ಲಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net