ಬೃಹತ್ ಉದ್ಯೋಗ ಮೇಳ

JOB Fair
Published on

 ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಬೆಂಗಳೂರು ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಹಾನಗರ ಪಾಲಿಕೆ, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಮೈಸೂರು ಬೃಹತ್ ಉದ್ಯೋಗ ಮೇಳ ಯುವ ಸಮೃದ್ಧಿ ಸಮ್ಮೇಳನವನ್ನು ಅಕ್ಟೋಬರ್ 17 ರಂದು ಬೆಳಗ್ಗೆ 9 ಗಂಟೆಯಿoದ ಸಂಜೆ 05 ಗಂಟೆಯವರೆಗೆ ನಡೆಯುವುದು, ಹಾಗೂ ಉದ್ಘಾಟನಾ ಕಾರ್ಯಕ್ರಮವು ಬೆಳಗ್ಗೆ 11 ಗಂಟೆಗೆ ಮಹಾರಾಜ ಕಾಲೇಜಿನ ಮೈದಾನದಲ್ಲಿ ಆಯೋಜಿಸಲಾಗಿದೆ.

 ಮಾನ್ಯ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದು, ರಾಜ್ಯಸಭಾ ಸದಸ್ಯರು ಹಾಗೂ ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್.ಡಿ. ದೇವೇಗೌಡ, ಉಕ್ಕು ಮತ್ತು ಬೃಹತ್ ಕೈಗಾರಿಕಾ ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವರಾದ ಕೆ. ವೆಂಕಟೇಶ್, ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್, ಇಂಧನ ಸಚಿವರಾದ ಕೆ.ಜೆ. ಜಾರ್ಜ್, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ ಖರ್ಗೆ, ಕೃಷಿ ಸಚಿವರಾದ ಎನ್. ಚೆಲುವರಾಯಸ್ವಾಮಿ, ಕಾರ್ಮಿಕ ಸಚಿವರಾದ ಸಂತೋಷ್ ಎಸ್ ಲಾಡ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಲಕ್ಷ್ಮಿ ಆರ್. ಹೆಬ್ಬಾಳ್ಕರ್, ಉನ್ನತ ಶಿಕ್ಷಣ ಸಚಿವರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಸುಧಾಕರ್, ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಭೋಸರಾಜು, ಉಪ ಸಭಾಪತಿಗಳಾದ ಎಂ.ಕೆ. ಪ್ರಾಣೇಶ್, ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ನಿಗಮದ ಅಧ್ಯಕ್ಷರು ಹಾಗೂ ಹೆಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿಲ್ ಕುಮಾರ್ ಸಿ., ಚಾಮುಂಡೇಶ್ವರಿ ವಿದ್ಯುತ್ ನಿಗಮ ನಿಯಮಿತದ ಅಧ್ಯಕ್ಷರಾದ ಎ.ಬಿ. ರಮೇಶ್ ಬಂಡಿ ಸಿದ್ದೇಗೌಡ, ರಾಜ್ಯ ಗೃಹ ಮಂಡಳಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಎಂ. ಶಿವಲಿಂಗೇಗೌಡ, ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್‌ನ ಅಧ್ಯಕರು ಮತ್ತು ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಸದ್ಯಸರಾದ ಸಿ. ಪುಟ್ಟರಂಗಶೆಟ್ಟೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರು ಹಾಗೂ ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ, ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶೃಂಗೇರಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಟಿ.ಡಿ. ರಾಜೇಗೌಡ, ಸನ್ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ್ಣ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಶಾಸಕರಾದ ದಿನೇಶ್ ಗೂಳಿಗೌಡ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ. ಪುಷ್ಪ ಅಮರನಾಥ್ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ, ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಎಂ. ಶ್ರೀನಿವಾಸ್ ಅವರ ಘನ ಉಪಸ್ಥಿತಿಯಲ್ಲಿ, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಹರೀಶ್ ಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net