ಬೆಂ.ಉತ್ತರ ವಿವಿ ಸಂಯೋಜಿತ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ತರಬೇತಿ / `ಇಂಡಿಯಾ ಫಾರ್ ಐಎಎಸ್' ಸಂಸ್ಥೆಯೊAದಿಗೆ ಒಪ್ಪಂದಕ್ಕೆ ಸಹಿ / ನಿರಂಜನವಾನಳ್ಳಿ

Published on

ವಿಜಯವಾಣಿ ಸುದ್ದಿಜಾಲ ಕೋಲಾರ

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ವಿವಿ ವ್ಯಾಪ್ತಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ನೀಡಲು ನಡೆಸಿದ ಪ್ರಯತ್ನದಲ್ಲಿ `ಇಂಡಿಯಾ ಫಾರ್ ಐಎಎಸ್ ಸಂಸ್ಥೆಯೊAದಿಗೆ ಒಪ್ಪಂದ ಮಾಡಿಕೊಂಡಿದ್ದು, ವಿದ್ಯಾರ್ಥಿ ಸಮುದಾಯದಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ ಎಂದು ವಿವಿ ಕುಲಪತಿ ಪ್ರೊ.ನಿರಂಜನವಾನಳ್ಳಿ ತಿಳಿಸಿದರು.

ತಾಲ್ಲೂಕಿನ ಮಂಗಸAದ್ರದ ಬೆಂಗಳೂರು ಉತ್ತರ ವಿವಿ ಸ್ನಾತಕೋತ್ತರ ಕೇಂದ್ರದಲ್ಲಿ ನಡೆದ ಸಮಾರಂಭದಲ್ಲಿ ಕುಲಪತಿಗಳ ಸಮ್ಮುಖದಲ್ಲಿ ಆದ ಒಪ್ಪಂದಕ್ಕೆ ಕುಲಸಚಿವರಾದ ಪ್ರೊ.ಡಿ.ಕುಮುದಾ ಹಾಗೂ `ಇಂಡಿಯಾ ಫಾರ್ ಐಎಎಸ್' ಸಂಸ್ಥೆಯ ಮುಖ್ಯಸ್ಥ ನಿವೃತ್ತ ಐಎಎಸ್ ಅಧಿಕಾರಿ ಶ್ರೀನಿವಾಸ್ ಸಹಿ ಹಾಕಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕುಲಪತಿಗಳು, ಈ ಒಪ್ಪಂದದಿAದಾಗಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಇಚ್ಚಿಸುವ ಬೆಂಗಳೂರು ಉತ್ತರ ವಿವಿಯ ಎಲ್ಲಾ ಸಂಯೋಜಿತ ಕಾಲೇಜುಗಳ ವಿದ್ಯಾರ್ಥಿಗಳಿಗೆ ಈ ಉಚಿತ ಕೋಚಿಂಗ್ ಸೌಲಭ್ಯ ಸಿಗಲಿದೆ ಎಂದು ತಿಳಿಸಿದರು.

`ಇಂಡಿಯಾ ಫಾರ್ ಐಎಎಸ್' ಸಂಸ್ಥೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲಿದ್ದು, ಕಲಿಕೆಗೆ ಅಗತ್ಯವಾದ ಪಠ್ಯವಸ್ತು, ಕಲಿಕಾ ಮೆಟಿರಿಯಲ್‌ಅನ್ನು ಆನ್‌ಲೈನ್ ಮೂಲಕ ವಿದ್ಯಾರ್ಥಿಗಳಿಗೆ ತಲುಪಿಸಲಿದೆ ಎಂದು ತಿಳಿಸಿದರು.

ತಿಂಗಳಿಗೊAದು ಪರೀಕ್ಷೆ ನಡೆಸಿ ಅದರಲ್ಲಿ ತೇರ್ಗಡೆಯಾಗುವ ವಿದ್ಯಾರ್ಥಿಗಳನ್ನು ಉಚಿತ ಕೋಚಿಂಗ್‌ಗೆ ಆಯ್ಕೆ ಮಾಡಿಕೊಂಡು ಉಚಿತ ತರಬೇತಿ ನೀಡುವ ಉದ್ದೇಶವನ್ನು ಸಂಸ್ಥೆ ಹೊಂದಿದ್ದು, ಜಿಲ್ಲೆಯ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಬೇಕು ಎಂದು ಕಿವಿಮಾತು ಹೇಳಿದರು.

ಕೋಲಾರ ಜಿಲ್ಲೆ ಐಎಎಸ್, ಕೆಎಎಸ್ ಅಭ್ಯರ್ಥಿಗಳನ್ನು ಹೆಚ್ಚು ಹೊಂದಿದ್ದ ಜಿಲ್ಲೆ ಎಂಬ ಖ್ಯಾತಿ ಇತ್ತು ಆದರೆ ಇತ್ತೀಚಿನ ದಿನಗಳಲ್ಲಿ ಇದು ಕಡಿಮೆಯಾಗಿದ್ದು, ಜಿಲ್ಲೆಯ ಘನತೆ ಮರುಸ್ಥಾಪನೆಗೆ ಈ ಪ್ರಯತ್ನ ಸಹಕಾರಿಯಾಗಲಿ ಎಂದು ಹಾರೈಸಿದರು.

ಈ ಸಂಸ್ಥೆಯ ನೇತೃತ್ವವನ್ನು ನಿವೃತ್ತ ಐಎಎಸ್ ಅಧಿಕಾರಿ ಶ್ರೀನಿವಾಸ್ ಅವರೇ ವಹಿಸಿಕೊಂಡಿರುವುದರಿAದ ಇಲ್ಲಿ ತರಬೇತಿ ಪಡೆಯುವ ವಿದ್ಯಾರ್ಥಿಗಳು ಐಎಎಸ್ ಪಾಸಾಗಲು ನಡೆಸುವ ಅಧ್ಯಯನದ ಅರಿವು ಅತಿ ಬೇಗ ಸಿಗಲಿದೆ, ಅನುಭವಿಯಾಗಿರುವ ಶ್ರೀನಿವಾಸ್ ಅವರು ಜಿಲ್ಲೆಯ ವಿದ್ಯಾರ್ಥಿಗಳ ಶ್ರೇಯೋಭಿವೃದ್ದಿಗೆ ಮುಂದಾಗಿರುವುದಕ್ಕೆ ವಿವಿಯಿಂದ ಧನ್ಯವಾದ ತಿಳಿಸಿದರು.

`ಇಂಡಿಯಾ ಫಾರ್ ಐಎಎಸ್' ಸಂಸ್ಥೆಯ ಮುಖ್ಯಸ್ಥರಾದ ನಿವೃತ್ತ ಐಎಎಸ್ ಅಧಿಕಾರಿ ಶ್ರೀನಿವಾಸ್ ಒಪ್ಪಂದಕ್ಕೆ ಸಹಿಹಾಕಿ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡುವ ಆಶಯದೊಂದಿಗೆ ಈ ಪ್ರಯತ್ನ ನಡೆಸಿದ್ದು, ಕೋಲಾರ ಜಿಲ್ಲೆಯ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಲು ಮುಂದೆ ಬರಬೇಕು ಎಂದು ಕೋರಿದರು.

ಕಾರ್ಯಕ್ರಮದಲ್ಲಿ ಕುಲಸಚಿವರಾದ ಪ್ರೊ.ಡಿ.ಕುಮುದಾ ಮತ್ತಿತರರು ಹಾಜರಿದ್ದರು.

ಚಿತ್ರ ೧೦ ಕೆ.ಎಲ್.ಆರ್. ೦೭ : ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ವಿವಿ ವ್ಯಾಪ್ತಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ನೀಡಲು ನಡೆಸಿದ ಪ್ರಯತ್ನದಲ್ಲಿ `ಇಂಡಿಯಾ ಫಾರ್ ಐಎಎಸ್ ಸಂಸ್ಥೆಯೊAದಿಗೆ ಒಪ್ಪಂದಕ್ಕೆ ಮಂಗಳವಾರ ಸಹಿ ಹಾಕಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net