ಬೆಂಗಳೂರು ಗ್ರಾಮಾಂತರ, ಬೆಳಗಾವಿ ವಿಭಾಗಕ್ಕೆ ಸಮಗ್ರ ಪ್ರಶಸ್ತಿ

3
Published on

ರಾಜ್ಯ ಮಟ್ಟದ ‘ದಸರಾ ಮುಖ್ಯಮಂತ್ರಿ ಕಪ್’ ಕ್ರೀಡಾಕೂಟದ ಫ್ರೀಸ್ಟೈಲ್ ಕುಸ್ತಿ ಪಂದ್ಯಾವಳಿಯಲ್ಲಿ ಬೆಂಗಳೂರು ಗ್ರಾಮಾಂತರ ಹಾಗೂ ಬೆಳಗಾವಿ ವಿಭಾಗ ತಂಡಗಳು ಕ್ರಮವಾಗಿ ಪುರುಷರ ಹಾಗೂ ಮಹಿಳೆಯರ ವಿಭಾಗದಲ್ಲಿ ‘ಸಮಗ್ರ ತಂಡ’ ಪ್ರಶಸ್ತಿ ಪಡೆದವು.

ನಗರದ ಡಿ.ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ಗುರುವಾರ ಮುಕ್ತಾಯಗೊಂಡ ಫ್ರೀಸ್ಟೈಲ್ ಕುಸ್ತಿಯ ಪುರುಷರ ವಿಭಾಗದಲ್ಲಿ ಬೆಂಗಳೂರು ಗ್ರಾಮಾಂತರ ತಂಡ ಹೆಚ್ಚು ಅಂಕ ಪಡೆಯುವ ಮೂಲಕ ಈ ಸಾಧನೆ ಮಾಡಿತು. ಬೆಳಗಾವಿ ವಿಭಾಗ ತಂಡ ಎರಡನೇ ಸ್ಥಾನ ಪಡೆಯಿತು. ಮಹಿಳಾ ವಿಭಾಗದಲ್ಲಿ ಮೈಸೂರು ವಿಭಾಗ ತಂಡ ದ್ವಿತೀಯ ಸ್ಥಾನ ಪಡೆಯಿತು.

ಇನ್ನೂ ಗ್ರೀಕೊ ರೋಮನ್ ಕುಸ್ತಿಯಲ್ಲಿ ಬೆಳಗಾವಿ ವಿಭಾಗ ತಂಡ ಹೆಚ್ಚು ಅಂಕಗಳೊಂದಿಗೆ ‘ಸಮಗ್ರ’ ಪ್ರಶಸ್ತಿ ಪಡೆದರೆ, ಬೆಂಗಳೂರು ಗ್ರಾಮಾಂತರ ತಂಡ ದ್ವಿತೀಯ ಸ್ಥಾನ ಪಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net