ಬೆಂಗಳೂರು ಸಮಗ್ರ ಅಭಿವೃದ್ಧಿಯ ಸಂಕಲ್ಪ, ಸಿಎಂ ಬಿಎಸ್ ವೈ ಹೇಳಿಕೆ

Published on

ಬೆಂಗಳೂರು: ದೇಶದ 75 ಸ್ವಾತಂತ್ರ್ಯ ದಿನಾಚರಣೆ ವೇಳೆ ಬೆಂಗಳೂರು ಮಹಾನಗರ ಹೀಗಿರಬೇಕೆಂಬ ಸ್ಪಷ್ಟ ಪರಿಕಲ್ಪನೆ ಹಾಗೂ ಮುಂದಿನ 20 ವರ್ಷಗಳ ಬೆಳವಣಿಗೆ ವೇಗ ಆಧರಿಸಿ ಸಮಗ್ರ ಅಭಿವೃದ್ಧಿ ಯೋಜನೆ ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
'ಬೆಂಗಳೂರು ಮಿಷನ್-2022' ಬೆಂಗಳೂರಿಗೆ ನವ ಚೈತನ್ಯ ತುಂಬಲು ಉದ್ದೇಶಿತ ಯೋಜನೆ ಕುರಿತು ಗುರುವಾರ ಮಾಧ್ಯಮ ಸಂವಾದಕ್ಕೆ ಮಾತನಾಡಿದ ಅವರು ಈ ಯೋಜನೆಗೆ ಹಣದ ಕೊರತೆಯಿಲ್ಲ. ನಿಗದಿತ 2 ವರ್ಷಗಳ ಕಾಲಮಿತಿಯೊಳಗೆ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ ಎಂದರು.
ಸುಗಮ ಸಂಚಾರ, ಸ್ವಚ್ಛ, ಸುಂದರ ಹಾಗೂ ಹಸಿರು ಬೆಂಗಳೂರು ನಿರ್ಮಿಸಿ ವಿಶ್ವದರ್ಜೆಯ ನಗರವನ್ನಾಗಿ ರೂಪಿಸುವುದು ಸರ್ಕಾರದ ದೃಢ ಸಂಕಲ್ಪವಾಗಿದೆ ಎಂದು ಬಿಎಸ್ ವೈ ಹೇಳಿದರು.
ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ, ಸಚಿವರಾದ ಎಸ್.ಸುರೇಶ್ ಕುಮಾರ್, ಬಿ.ಎ.ಬಸವರಾಜ, ಕೆ.ಗೋಪಾಲಯ್ಯ, ಡಾ.ಕೆ.ಸುಧಾಕರ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಇದ್ದರು.
ನಂತರ ನಡೆದ ಸಂವಾದದಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಸಚಿವರು, ಅಧಿಕಾರಿಗಳು ಉತ್ತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net