ಬೆಕ್ಕರೆ ಗ್ರಾಮದ ದೊಡ್ಡಕೆರೆ ಏರಿ ಕುಸಿತ

16BTP03
ಬೆಟ್ಟದಪುರ ಸಮೀಪದ ಬೆಕ್ಕರೆ ಗ್ರಾಮದ ದೊಡ್ಡಕೆರೆ ಏರಿಯು ಒಡೆದು ಹೋದ ಹಿನ್ನಲೆ ಕೆರೆಯ ನೀರು ಹರಿದು ಹೋಗುತ್ತಿರುವುದು.
Published on

ಬೆಟ್ಟದಪುರ: ಬೆಟ್ಟದಪುರ ಹಾಗೂ ಹಾರನಹಳ್ಳಿ ವ್ಯಾಪ್ತಿಯಲ್ಲಿ ಮೂರು ದಿನಗಳಿಂದ ಸುರಿಯುತ್ತಿರುವ ಧಾರಕಾರ ಮಳೆಗೆ ಕೆರೆ ಕಟ್ಟೆಗಳು ತುಂಬಿ ಹರಿಯುತ್ತಿವೆ.

ನಿತ್ಯ ರಾತ್ರಿ ವೇಳೆಯಲ್ಲಿ ಆರಂಭಗೊಳ್ಳುತ್ತಿರುವ ಮಳೆ ಮುಂಜಾನೆವರೆಗೆ ಎಡಬಿಡದೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಮಂಡಿಯುದ್ದಕ್ಕೆ ನೀರು ಹರಿದು ಬರುತ್ತಿದ್ದು, ಇದರಿಂದ ತಗ್ಗು ಪ್ರದೇಶದಲ್ಲಿ ಇರುವ ಗುಂಡಿಗಳು ತುಂಬಿ ಹರಿದಿವೆ. ಇನ್ನು ಇದರಿಂದ ಗ್ರಾಮಗಳಲ್ಲಿ ಕೆರೆಗಳು ತುಂಬಿ ರೈತರ ಜಮೀನಿಗಳಿಗೆ ನೀರು ನುಗಿದೆ.

ಸಮೀಪದ ಬೆಕ್ಕರೆ ಗ್ರಾಮದಲ್ಲಿ ಶನಿವಾರ ಸುರಿದ ಮಳೆಯಿಂದ ಗ್ರಾಮದ ದೊಡ್ಡಕೆರೆ ಏರಿ ಒಡೆದು ಅಕ್ಕಪಕ್ಕದ ತೋಟ ಹಾಗೂ ಜಮೀನುಗಳಿಗೆ ನೀರು ನುಗ್ಗಿದೆ. ಈ ಕೆರೆಯನ್ನು ಇತ್ತೀಚೆಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹೂಳೆತ್ತಿಸಿ ಅಭಿವೃದ್ಧಿಪಡಿಸಲಾಗಿತ್ತು. ಕೆರೆಯಿಂದ ಕೋಡಿ ಬಿದ್ದು ನೀರು ನುಗ್ಗಿದ ಪರಿಣಾಮ ರೈತರಿಗೆ ನಷ್ಟ ಉಂಟಾಗಿದ್ದು, ಈ ಬಗ್ಗೆ ಶಾಸಕರು ಹಾಗೂ ಅಧಿಕಾರಿಗಳು ಗಮನಹರಿಸಿ ಸೂಕ್ತ ಪರಿಹಾರ ಒದಗಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net