ಬೆಟ್ಟದಪುರದಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆ

19BTP01
Published on

ಬೆಟ್ಟದಪುರ : ಛಾಯಾಗ್ರಹಣವು ಜೀವನದ ಪ್ರತಿಯೊಂದು ಕ್ಷಣಗಳನ್ನು, ಭಾವನೆಗಳನ್ನು ಹಾಗೂ ಸಾಂಸ್ಕೃತಿಕ ವೈವಿಧ್ಯತೆಯನ್ನು ಸೆರೆ ಹಿಡಿಯುವ ಮೂಲಕ ಜಗತ್ತಿಗೆ ನೆನಪುಗಳನ್ನು ಹಂಚಿಕೊಳ್ಳಲು ಸಹಾಯಕವಾಗಲಿದೆ ಎಂದು ಬೆಟ್ಟದಪುರ ಛಾಯಾಗ್ರಾಹಕ ಸಂಘದ ಗೌರವಾಧ್ಯಕ್ಷ ಗಿರೀಶ ಅಭಿಪ್ರಾಯ ಪಟ್ಟರು. ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ಶ್ರೀಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಬೆಟ್ಟದಪುರ ಛಾಯಾಗ್ರಾಹಕ ಸಂಘದವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆಯ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು, ಛಾಯಾಗ್ರಹಣದ ಕಲೆಯನ್ನು ಗೌರವಿಸುವ ಮತ್ತು ಗುರುತಿಸುವುದು ಮಹತ್ವದ ಕೆಲಸ. ನಾವೆಲ್ಲರೂ ನಮ್ಮ ನಮ್ಮ ಕೆಲಸಗಳನ್ನು ಅತ್ಯಂತ ಶ್ರದ್ಧೆಯಿಂದ ಮಾಡಿದರೆ ಅಲ್ಲಿ ಭಗವಂತ ನಮಗೆ ಸಮೃದ್ಧಿ ಜೀವನ ಮತ್ತು ಪ್ರಖ್ಯಾತಿ ನೀಡುವುದರಲ್ಲಿ ಸಂಶಯವಿಲ್ಲ ಎಂದರು. ಮಾಡುವ ಕೆಲಸದಲ್ಲಿ ಪ್ರಾಮಾಣಿಕತೆ, ನಿಷ್ಠೆಯನ್ನು ತೋರೋಣ ಎಂದು ಅವರು ಸಲಹೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net