ರೈತರು ಬೆಳೆ ವಿವರಗಳನ್ನು ದಾಖಲಿಸುವುದರಿಂದ ಪ್ರಕೃತಿ ವಿಕೋಪ ಸಂದರ್ಭಗಳಲ್ಲಿ ಬೆಳೆ ಹಾನಿಗೆ ಸಂಬAಧಿಸಿದAತೆ ಪರಿಹಾರ ನೀಡಲು, ಬೆಳೆ ವಿಮೆ ಪಾವತಿಸಲು, ಕನಿಷ್ಠ ಬೆಂಬಲ ಬೆಲೆ ಪಡೆಯಲು, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯಡಿ ಸೌಲಭ್ಯ ಪಡೆಯಲು, ಬ್ಯಾಂಕ್‌ಗಳಿAದ ಸಾಲ ಸೌಲಭ್ಯವನ್ನು ಪಡೆಯಲು ಅನುಕೂಲಕರವಾಗಿರುತ್ತದೆ ಹಾಗೂ ಆರ್.ಟಿ.ಸಿನಲ್ಲಿ ಬೆಳೆ ವಿವರಗಳನ್ನು ದಾಖಲಿಸಲು ಸಹಾಯವಾಗುತ್ತದೆ ಎಂದು ಕೃಷಿ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ರೈತರು ಬೆಳೆ ವಿವರಗಳನ್ನು ದಾಖಲಿಸಲು ಬೆಳೆ ಸಮೀಕ್ಷೆ ಮೊಬೈಲ್ ಆಪ್‌ನ್ನು ಪ್ಲೇ ಸ್ಟೋರ್‌ನಲ್ಲಿ ಬಿಡುಗಡೆ ಮಾಡಿದ್ದು, ರೈತರೆ ತಮ್ಮ ಮೊಬೈಲ್‌ನಲ್ಲಿ ಡೌನ್‌ಲೋಡ್ ಮಾಡಿಕೊಂಡು ಬೆಳೆ ವಿವರಗಳನ್ನು ದಾಖಲಿಸಬಹುದಾಗಿದೆ. ಒಂದು ವೇಳೆ ದಾಖಲಿಸಲು ಕಷ್ಟ ಸಾಧ್ಯವಾದಲ್ಲಿ ತಮ್ಮ ಗ್ರಾಮದ ಖಾಸಗಿ ನಿವಾಸಿಗಳ ಸಹಾಯದೊಂದಿಗೆ ಬೆಳೆ ವಿವರಗಳನ್ನು ದಾಖಲಿಸಬಹುದಾಗಿದೆ.
ರೈತರು ಬೆಳೆ ವಿವರಗಳನ್ನು ಮೊಬೈಲ್ ಆಪ್ ಮೂಲಕ ದಾಖಲಿಸಲು ತಮ್ಮ ಎಲ್ಲಾ ಜಮೀನಿನ ವಿವರಗಳನ್ನು ಫ್ರೂಟ್ಸ್ ತಂತ್ರಾAಶದ ಎಫ್.ಐ.ಡಿ.ಗೆ ಜೋಡಣೆಯಾಗಿರುವುದು ಕಡ್ಡಾಯವಾಗಿರುತ್ತದೆ. ಆದ್ದರಿಂದ ಎಫ್.ಐ.ಡಿ.ಗೆ ಜೋಡಣೆಯಾಗದಿರುವ ಸರ್ವೆ ನಂಬರ್ ಹಾಗೂ ಆಧಾರ್ ಪ್ರತಿಯೊಂದಿಗೆ ತಮ್ಮ ಗ್ರಾಮದ ಗ್ರಾಮ ಆಡಳಿತಾಧಿಕಾರಿ, ಸಂಬAಧಿಸಿದ ಕೃಷಿ ಹಾಗೂ ತೋಟಗಾರಿಕಾ ಅಧಿಕಾರಿಗಳ ಮುಖಾಂತರ ಸರ್ವೆ ನಂಬರ್‌ಗಳನ್ನು ಎಫ್.ಐ.ಡಿ.ಗೆ ಜೋಡಣೆ ಮಾಡಬಹುದು ಎಂದು ಕೋಲಾರ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.