

ಚಿತ್ರದುರ್ಗ: ವೀರಶೈವ ಲಿಂಗಾಯಿತ ಜಂಗಮರಿಗೆ ಪರಿಶಿಷ್ಟ ಜಾತಿ ಬೇಡ ಜಂಗಮ ಪ್ರಮಾಣ ಪತ್ರ ವಿತರಿಸಬಾರದೆಂದು ಆಗ್ರಹಿಸಿ ಕರ್ನಾಟಕ ದ ಲಿತ ಸಂಘರ್ಷ ಸಮಿತಿ(ಪ್ರೊ.ಬಿ.ಕೃಷ್ಣಪ್ಪ)ಕಾರ‌್ಯಕರ್ತರು ಮಂಗಳವಾರ ಡಿಸಿ ಕಚೇರಿ ಎದುರು ಪ್ರತಿಭಟಿಸಿ ಎಡಿಸಿ ಇ.ಬಾಲಕೃಷ್ಣ ಅವರಿಗೆ ಮನವಿ ಸಲ್ಲಿಸಿದರು.
ರಾಜ್ಯದಲ್ಲಿ 1.5 ಲಕ್ಷಕ್ಕೂ ಹೆಚ್ಚು ಮಂದಿ ಬೇಡ ಜಂಗಮ ಜಾತಿ ಹೆಸರಲ್ಲಿ ನಕಲಿ ಪ್ರಮಾಣ ಪತ್ರ ಪಡೆದು ಸರ್ಕಾರಿ ನೌಕರಿ ಮತ್ತು ಮತ್ತಿತರ ಸೌಲಭ್ಯಗಳನ್ನು ಹಾಗೂ ಅನೇಕರು ರಾಜಕೀಯ ಪ್ರಾತಿನಿಧ್ಯ ಪಡೆದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ರೀತಿ ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಪಡೆದಿರುವ ಪ್ರಕರಣಗಳ ತ್ವರಿತ ಇತ್ಯರ್ಥಕ್ಕಾಗಿ ಪ್ರತಿ ಜಿಲ್ಲೆಯಲ್ಲೂ ವಿಶೇಷ ನ್ಯಾಯಾಲಯ ಸ್ಥಾಪಿಸುವಂತೆ ಒತ್ತಾ ಯಿಸಿದರು.
ಬೆಂಗಳೂರು ಅಖಿಲ ಕರ್ನಾಟಕ ಡಾ.ಬಿ.ಆರ್.ಅಂಬೇಡ್ಕರ್ ಬೇಡ ಜಂಗಮ ಪರಿಶಿಷ್ಟ ಜಾತಿ ರಕ್ಷಣಾ ವೇದಿಕೆಯ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಈ ಸಂಸ್ಥೆ ವಿತರಿಸಿರುವ ಜಾತಿ ಗುರುತಿನ ಚೀಟಿಗಳನ್ನು ಪರಿಗಣಿಸಿ ಜಾತಿ ಸಿಂಧುತ್ವ ಪ್ರಮಾಣ ಪತ್ರಗಳನ್ನು ನೀಡ ಬಾರದು.
ಒಂದು ವೇಳೆ ನಕಲಿ ಬೇಡ ಜಂಗಮ ಜಾತಿ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಿ,ಅವರ ವಿರುದ್ಧ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು. ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಶಿಕ್ಷಣ,ಉದ್ಯೋಗ, ಮತ್ತಿತರೆ ಸೌಲಭ್ಯ ಗಳನ್ನು ಪಡೆದಿರುವವರನ್ನು ಗುರುತಿಸಿ ಶಿಕ್ಷೆಗೊಳಪಡಿಸಬೇಕು.
ಮುಖ್ಯಮಂತ್ರಿ ರಾಜಕೀಯ ಕಾರ‌್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರ ಪುತ್ರ,ಪುತ್ರಿ ಮತ್ತು ಸಹೋದರ ದಾರುಕೇಶ್ವರಯ್ಯ ಹಾ ಗೂ ಅವರ ಮಕ್ಕಳು ಪಡೆದಿರುವ ಬೇಡ ಜಂಗಮ ಪರಿಶಿಷ್ಟ ಜಾತಿ ಪ್ರಮಾಣ ಪತ್ರಗಳನ್ನು ರದ್ದುಪಡಿಸಿ ಪ್ರಕರಣ ದಾಖಲಿಸುವಂತೆ ಆಗ್ರ ಹಿಸಿದರು.
ಸಮಿತಿ ಜಿಲ್ಲಾ ಸಂಚಾಲಕ ಕೆಂಗುಂಟೆ ಜಯಪ್ಪ,ಪ್ರಸನ್ನ,ರುದ್ರಮುನಿ,ಮುತ್ತುಗದೂರು ಶಿವಣ್ಣ,ಮಂಜಣ್ಣ ವಿಶ್ವನಾಥನಹಳ್ಳಿ,ಡಿ.ಒ.ನ ವೀನ್‌ಕುಮಾರ್,ಕೆ.ಆರ್.ಸುಂದರಮೂರ್ತಿ,ವಿಜಯ್‌ಕುಮಾರ್,ಹೆಗ್ಗೆರೆ ಶಂಕರ್,ಮಂಜಣ್ಣ,ಆರ್.ಪ್ರಕಾಶ್,ತಿಪ್ಪೇಸ್ವಾಮಿ,ಜಗದೀಶ್ ಮತ್ತಿತರರು ಇದ್ದರು.