

ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿಯ ಪ್ರವಾಸಿ ಮಂದಿರದ ಪಾರ್ಕಿಂಗ್ ಸ್ಥಳದಲ್ಲಿ ಅ.೩೦ರಂದು ಸಿ.ಆರ್.ತಿಮ್ಮಯ್ಯ ಎಂಬವರು ನಿಲ್ಲಿಸಿದ್ದ ಟಿವಿಎಸ್ ಅಪಾಚೆ ಮೋಟಾರ್ ಬೈಕ್ ಕಳವಾಗಿದ್ದು, ಈ ಬಗ್ಗೆ ತಿಮ್ಮಯ್ಯ ಅವರು ಮಡಿಕೇರಿ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಇದನ್ನು ಆಧರಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಅವರು ಡಿವೈಎಸ್‌ಪಿ ಬಿ.ಪಿ.ದಿನೇಶ್ ಕುಮಾರ್, ಸಿಐ ಅನೂಪ್ ಮಾದಪ್ಪ ನೇತೃತ್ವದಲ್ಲಿ ರಚಿಸಿದ್ದ ತನಿಖಾ ತಂಡ ಇದೀಗ ಕಳವು ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ.
ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಇಬ್ಬರು ಬಾಲಕರನ್ನು ಬಾಲ ಅಪರಾಧಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ.
ಮಡಿಕೇರಿ: ಕೊಡಗು ಜಿಲ್ಲೆ, ಹೊರ ಜಿಲ್ಲೆ ಮತ್ತು ರಾಜ್ಯಗಳಲ್ಲಿ ಬೈಕ್ ಕಳವು ಮಾಡಿದ ಆರೋಪದಡಿ ಇಬ್ಬರು ಅಪ್ರಾಪ್ತ ಬಾಲಕರನ್ನು ಕೊಡಗು ಜಿಲ್ಲಾ ಪೊಲೀಸರು ಪತ್ತೆ ಹಚ್ಚಿ, ಐದು ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.