ಬೊಕ್ಕಪಟ್ಣ ವ್ಯಕ್ತಿಯ ಕೊಲೆ

Published on

ಮಂಗಳೂರು: ನಗರದ ಬರ್ಕೆ ಪೊಲೀಸ್ ಠಾಣೆ ವ್ಯಾಪ್ತಿಯ ಬೊಕ್ಕಪಟ್ಣ ಎಂಬಲ್ಲಿ ವ್ಯಕ್ತಿಯೋರ್ವನನ್ನು ಕೊಲೆ ಮಾಡಲಾಗಿದ್ದು,ಗುರುವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ.

ಸ್ಥಳೀಯ ನಿವಾಸಿ ಇಂದ್ರಜಿತ್ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಮಾರಕಾಯುಧಗಳಿಂದ ಗಂಭೀರ ಗಾಯಗೊಳಿಸಿ ಕೊಲೆ ಮಾಡಲಾಗಿದೆ.ಹಣಕಾಸಿನ ವಿಚಾರದಲ್ಲಿ ಕೊಲೆ ನಡೆದಿರುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಬರ್ಕೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net