ಬೌದ್ಧ ಮಹಾ ಸಮ್ಮೇಳನ

budda
Published on

ಕರ್ನಾಟಕ ರಾಜ್ಯ ಬಿಕ್ಕು ಸಂಘ, ರಾಜ್ಯ ಬೌದ್ಧ ಸಂಘ ಸಂಸ್ಥೆಗಳು ಹಾಗೂ ರಾಜ್ಯ ಅಂಬೇಡ್ಕರ್ ವಾದಿ ಸಂಘ-ಸಂಸ್ಥೆಗಳು ಮತ್ತು ವಿಶ್ವ ಮೈತ್ರಿ ಬುದ್ಧ ವಿಹಾರದ ಆಶ್ರಯದಲ್ಲಿ ಅ.14 ಮತ್ತು 15ರಂದು ಬೌದ್ಧ ಮಹಾ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಮಾಜಿ ಮೇಯರ್ ಪುರುಷೋತ್ತಮ್ ಹೇಳಿದರು.

ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಅಂದು ಬೆಳಗ್ಗೆ 10.30ಕ್ಕೆ ಸಮ್ಮೇಳನ ನಡೆಯಲಿದೆ. ಎರಡು ದಿನಗಳು ಅಂತಾರಾಷ್ಟ್ರೀಯ ಬೌದ್ಧ ಸಾಂಸ್ಕೃತಿಕ ಸಂಗಮದ ಮೂಲಕ ಮಾನವ ಮೈತ್ರಿಯ ಪಯಣವನ್ನು ಹಮ್ಮಿಕೊಂಡಿದ್ದು, ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದ ಬಿಕ್ಕುಗಳನ್ನು ಗೌರವಿಸಲಾಗುತ್ತದೆ ಶುಕ್ರವಾರ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅಂಬೇಡ್ಕರ್ ಅವರಂತೆ ದೇಶದಾದ್ಯಂತ ಬೌದ್ಧ ಚಿಂತನೆಗಳನ್ನು ಬಿತ್ತುತ್ತಾ ಸಾಗುತ್ತಿರುವ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಬಿಕ್ಕುಗಳು, ಧಮ್ಮ ಮಹಾಮಾತ್ರರು, ಬೌದ್ಧ ಚಿಂತಕರು ಸೇರಿದಂತೆ ನಾನಾ ಸಂಘಟನೆಗಳ ಪದಾಕಾರಿಗಳು ಭಾಗವಹಿಸಲಿದ್ದಾರೆ. ಧ್ಯಾನ, ಚಿಂತನೆ ಮತ್ತು ವಿಚಾರಗಳನ್ನೊಳಗೊಂಡ ಐತಿಹಾಸಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದರು.

‘‘ಸಮ್ಮೇಳನಕ್ಕೆ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸಬೇಕಿತ್ತು. ಆದರೆ, ಅವರ ಅನಾರೋಗ್ಯದ ಕಾರಣ ಸಾಧ್ಯವಾಗಿಲ್ಲ. ಆರೋಗ್ಯ ಸರಿಯಾದರೆ ಅವರನ್ನು ಮುಖ್ಯ ಅತಿಥಿಗಳಾಗಿ ಆಹ್ವಾನಿಸುತ್ತೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ.ಮಹದೇವಪ್ಪ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸುನೀಲ್ ಬೋಸ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮನೋರಖ್ಖಿತ ಭಂತೇಜಿ, ಬೋರತ್ನ ಭಂತೇಜಿ, ಡಾ.ಕಲ್ಯಾಣಸಿರಿ ಭಂತೇಜಿ, ಸುಗತಪಾಲ ಭಂತೇಜಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net