ಬ್ಯಾಟರಿ ವಾಹನಗಳಿಗೆ ರಸ್ತೆ ತೆರಿಗೆ ವಿನಾಯಿತಿ

Battury Vehicle
Published on

ನವದೆಹಲಿ: ದೆಹಲಿ ಸರ್ಕಾರ ಹೊಸ ಎಲೆಕ್ಟ್ರಿಕ್ ವಾಹನ ನೀತಿ ಪ್ರಕಟಿಸಿದ್ದು, ಅದರನ್ವಯ ವಿದ್ಯುತ್ ಬ್ಯಾಟರಿ ಚಾಲಿತ ವಾಹನಗಳಿಗೆ ರಸ್ತೆ ತೆರಿಗೆಯಿಂದ ವಿನಾಯಿತಿ ನೀಡಿದೆ. ನೋಂದಣಿ ಶುಲ್ಕ ಮನ್ನಾ ಬಗ್ಗೆ ಎರಡು-ಮೂರು ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಸಾರಿಗೆ ಸಚಿವ ಕೈಲಾಶ್ ಗೆಹ್ಲೋಟ್ ಭಾನುವಾರ ಹೇಳಿದ್ದಾರೆ.

ಬ್ಯಾಟರಿ ಚಾಲಿತ ವಾಹನಗಳ ರಸ್ತೆ ತೆರಿಗೆ ವಿನಾಯಿತಿ ತಕ್ಷಣದಿಂದಲೇ ಜಾರಿಗೆ ಬರುವ ಬಗ್ಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಶನಿವಾರವೇ ಆದೇಶ ಹೊರಡಿಸಿದ್ದಾರೆ ಎಂದು ಸಾರಿಗೆ ಇಲಾಖೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net