ಭಗವಾನ್ ಮಹಾವೀರ ಜಯಂತಿ

budda may
Published on

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಭಗವಾನ್ ಮಹಾವೀರ ಜಯಂತಿಯನ್ನು ಏಪ್ರಿಲ್ 10 ರಂದು ಸಂಜೆ 5.30 ಗಂಟೆಗೆ ಕರ್ನಾಟಕ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ.

ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಉಕ್ಕು ಮತ್ತು ಬೃಹತ್ ಕೈಗಾರಿಕಾ ಕೇಂದ್ರ ಸಚಿವರಾದ ಎಚ್.ಡಿ ಕುಮಾರಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪನವರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದು, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಹರೀಶ್ ಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವರಾದ ಕೆ.ವೆಂಕಟೇಶ್, ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ನಿಗಮದ ಅಧ್ಯಕ್ಷರು ಹಾಗೂ ಹೆಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿಲ್ ಕುಮಾರ್.ಸಿ, ಚಾಮುಂಡೇಶ್ವರಿ ವಿದ್ಯುತ್ ನಿಗಮ ನಿಯಮಿತದ ಅಧ್ಯಕ್ಷರಾದ ಎ.ಬಿ ರಮೇಶ್ ಬಂಡಿ ಸಿದ್ದೇಗೌಡ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ. ಪುಷ್ಪ ಅಮರನಾಥ್ ಹಾಗೂ ಬೆಂಗಳೂರು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಅವರು ಗೌರವ ಉಪಸ್ಥಿತರಿರಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net