ಭಾರತದಲ್ಲಿ ಮಹಿಳೆಯರ ಭಾಗವಹಿಸುವಿಕೆ ಕಡಿಮೆ

2 (1)
Published on

ಮೈಸೂರು: ಜಾಗತಿಕ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮುತ್ತಿರುವ ಭಾರತದ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಇನ್ನೂ ಕಡಿಮೆ ಇದೆ ಎಂದು ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಯ ಉಪ ವ್ಯವಸ್ಥಾಪಕ ನಿರ್ದೇಶಕಿ ಡಾ.ಗೀತಾ ಗೋಪಿನಾಥ್ ಕಳವಳ ವ್ಯಕ್ತಪಡಿಸಿದರು.

ಸರಸ್ವತಿಪುರಂನಲ್ಲಿರುವ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಭಾನವಾರ ಆಯೋಜಿಸಿದ್ದ 15ನೇ ಪದವೀಧರರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರತಿಯೊಂದು ರಂಗದಲ್ಲೂ ಮಹಿಳೆಯರು ಪಾಲ್ಗೊಳ್ಳಬೇಕು. ಅದು ದೇಶದ ಪ್ರಗತಿ ನೆರವಾಗಲಿದೆ. ಆದರೆ, ಭಾರತದಲ್ಲಿ ಮಹಿಳೆಯರ ಭಾಗವಹಿಸುವಿಕೆ ಕಡಿಮೆ ಇದೆ. ಇದರಿಂದ ದೇಶದ ಅಭಿವೃದ್ಧಿಗೆ ಅಡೆತಡೆಯಾಗಲಿದೆ. ಈ ಸಮಸ್ಯೆಯ ನಿವಾರಣೆಗೆ ಕ್ರಮ ವಹಿಸಬೇಕಾಗಿದೆ ಎಂದು ಅಭಿಪ್ರಾಯಿಸಿದರು.

ಭಾರತದಲ್ಲಿ ಸಾರ್ವಜನಿಕ ಡಿಜಿಟಲ್ ವ್ಯವಸ್ಥೆ ತ್ವರಿತಗತಿಯಲ್ಲಿ ಪ್ರಗತಿ ಹೊಂದುತ್ತಿದೆ.ಅದಕ್ಕೆ ತಕ್ಕಂತೆ ಮೂಲ ಸೌಕರ್ಯ ಕಲ್ಪಿಸಲಾಗುತ್ತಿದೆ. ನೀತಿ-ನಿಯಮಾವಳಿಯಲ್ಲಿ ಬದಲಾವಣೆ ತರುವುದರೊಂದಿಗೆ ಜನಸಾಮಾನ್ಯರಿಗೆ ಡಿಜಿಟಲ್ ವ್ಯವಸ್ಥೆಯನ್ನು ಸರಳೀಕರಣಗೊಳಿಸಲಾಗಿದೆ. ಅಂತೆಯೇ ಕಾರ್ಮಿಕ ವಲಯದಲ್ಲೂ ಕೆಲ ಸುಧಾರಣೆ ತರಬೇಕಿದೆ ಎಂದರು

ಭಾರತವು ಜಿ-20 ಗುಂಪಿನ ಅಧ್ಯಕ್ಷತೆ ವಹಿಸಿಕೊಂಡಿರುವುದು ಮಹತ್ವದ ಬೆಳವಣಿಗೆಯಾಗಿದೆ. ಪ್ರಮುಖ ಪಾತ್ರ ವಹಿಸಲು ವೇದಿಕೆಯಾಗಿದೆ ಎಂದರು.

ಜಿ20 ಗುಂಪಿನಲ್ಲಿರುವ ದೇಶಗಳು ಜಾಗತಿಕ ಜಿಡಿಪಿಯ ಶೇ.80ರಷ್ಟು ಪಾಲು ಹೊಂದಿವೆ. ಹೀಗಾಗಿ, ಈ ಎಲ್ಲ ದೇಶಗಳು ಒಂದೆಡೆ ಸೇರಿ ಜಗತ್ತು ಎದುರಿಸುವ ಸಮಸ್ಯೆಗಳ ಕುರಿತು ಚರ್ಚಿಸಲಿವೆ. ಸಾವಿನ ಪ್ರಮಾಣ ಏರಿಕೆ, ಸೈಬರ್ ರಕ್ಷಣೆ, ಕ್ರಿಪ್ಟೋ ಕರೆನ್ಸಿ, ಆಹಾರ ಭಧ್ರತೆ, ಪೋಷಕಾಂಶದ ಕೊರತೆ… ಇವುಗಳೆಲ್ಲ ಪ್ರಮುಖ ಚರ್ಚಾ ವಿಷಯಗಳಾಗಿವೆ ಎಂದರು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪದಕ, ಬಹುಮಾನ ಪ್ರದಾನ ಮಾಡಲಾಯಿತು.

ಸುತ್ತೂರುಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ.ಬೆಟಸೂರಮಠ, ಪ್ರಾಂಶುಪಾಲ ಡಾ.ಎಚ್.ಬಿ.ಸುರೇಶ್, ಡೀನ್(ಶೈಕ್ಷಣಿಕ) ಡಾ.ರೇಚಣ್ಣ, ಪರೀಕ್ಷಾ ನಿಯಂತ್ರಣಾದಿಕಾರಿ ಎಂ.ಎಂ.ಸ್ವಾಮಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net